ಅಂತಾರಾಷ್ಟ್ರೀಯ

ದೇಶದಲ್ಲಿ ಗಣನೀಯ ಇಳಿಕೆ ಕಂಡ ಕರೋನಾ ಸೋಂಕಿತರ ಸಂಖ್ಯೆ….!

ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 34,703 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಕೆಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 34,703 ಹೊಸ‌ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,06,19,932 ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 59,384 ಸೋಂಕಿತರು ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 2,97,52,294 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,64,357 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ದೇಶಾದ್ಯಂತ ನಿನ್ನೆ 553 ಸೋಂಕಿತರು ಮಾಹಾಮಾರಿ ಕೊರೋನಾದಿಂದ ಅಸುನೀಗಿದ್ದಾರೆ.

ಇದರೊಂದಿಗೆ ಕೊರೋನಾ ಸೋಂಕಿಗೆ ದೇಶದೆಲ್ಲೆಡೆ ಒಟ್ಟು ಈವರೆಗೆ ಬಲಿಯಾದವರ ಸಂಖ್ಯೆ4,03,281 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *