ಧಾರವಾಡ ಪ್ರಜಾಕಿರಣ.ಕಾಮ್ : ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಈ ಹಿಂದೆ ಡಿಸಿಪಿ ಯಾಗಿ ಕರ್ತವ್ಯ ನಿರ್ವಹಿಸಿದ್ದ ಗೋಪಾಲ ಬ್ಯಾಕೋಡ್ ಅವರನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಿದೆ.
ಕಳೆದ ಒಂದೂವರೆ ವರ್ಷದಿಂದ ಅವಳಿ ನಗರದಲ್ಲಿ ಸಂಚಾರಿ ಹಾಗೂ ಅಪರಾಧ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು.
ಇನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೊಕೇಶ್ ಜಗಲಾಸಕರ್ ಅವರನ್ನು ಧಾರವಾಡದಿಂದ ಪೊಲೀಸ್ ಅಕಾಡೆಮಿ ಮೈಸೂರಿಗೆ ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ ಗೋಪಾಲ್ ಬ್ಯಾಕೋಡ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.