ಬೆಳಗಾವಿ Prajakiran.com : ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜುಲೈ 3ನೇ ವಾರ ನಡೆವುದರ ಕುರಿತು ಮಾತನಾಡಿರುವ ಸಿಎಂ ಯಡಿಯೂರಪ್ಪ ಒಂದು ವೇಳೆ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬಾರದ ಹೋದರೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪರೀಕ್ಷೆಯನ್ನು ಜುಲೈ 3ನೇ ವಾರ ನಡೆಸಲಾಗುತ್ತದೆ ಎಂದು ಹೇಳಿದ್ದರು.
ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಬೆಳಗಾವಿಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಜುಲೈ 3ನೇ ವಾರ ಪರೀಕ್ಷೆ ನಡೆಸುವುದಾಗಿ ಹೇಳಿದ್ದು, ಒಂದು ವೇಳೆ ಆ ಸಮಯಕ್ಕೆ ಕೋವಿಡ್ ಎರಡನೇ ಅಲೆ ಹಿಡಿತಕ್ಕೆ ಬಾರದೆ ಹೋದರೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಇದು ಮತ್ತೆ ಪಾಲಕರಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸಿದೆ.