ರಾಜ್ಯ

ಧಾರವಾಡದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಇಬ್ಬರು ನಕಲಿ ವಿದ್ಯಾರ್ಥಿಗಳು ಹಾಜರ್





ಧಾರವಾಡ prajakiran.com : ವಿದ್ಯಾನಗರಿ ಧಾರವಾಡದಲ್ಲಿ ಸೋಮವಾರ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಇಬ್ಬರು ನಕಲಿ ವಿದ್ಯಾರ್ಥಿಗಳು ಹಾಜರಾದ ಘಟನೆ ಬೆಳಕಿಗೆ ಬಂದಿದೆ.

ಧಾರವಾಡದ ಬಾಸೆಲ್ ಮಿಶನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದ ಖಾಸಗಿ ಅಭ್ಯರ್ಥಿಗಳಲ್ಲಿ ಇಬ್ಬರು ಬೇರೆ ಅಭ್ಯರ್ಥಿಗಳ ಪರೀಕ್ಷೆ ಬರೆಯಲು ಬಂದಿದ್ದರು.



ಈ ಕುರಿತು ಸಂಶಯ ವ್ಯಕ್ತವಾದ ಹಿನ್ನಲೆಯಲ್ಲಿ ಅವರ ಪ್ರವೇಶ ಪತ್ರವನ್ನು ಪರಿಶೀಲಿಸಿದಾಗ ಪೋಟೋ ಹಾಗೂ ಪರೀಕ್ಷೆಗೆ ಹಾಜರಾದವರ ಮುಖಚರ್ಯೆ ಬದಲಿ ಕಂಡು ಬಂದಿದೆ.

ಹೀಗಾಗಿ ಅವರಿಬ್ಬರ ವಿರುದ್ದ ದೂರು ದಾಖಲಿಸಿ ಅವರನ್ನು ಪರೀಕ್ಷಾ ಕೇಂದ್ರದಿಂದ ಹೊರ ಹಾಕಲಾಗಿದೆ. ಅಲ್ಲದೆ, ಉಳಿದ ಪರೀಕ್ಷೆ ಬರೆಯದಂತೆ ಅಮಾನತು ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಜಿಲ್ಲೆಯ ಉಪನಿರ್ದೇಶಕ ಮೋಹನ ಹಂಚಾಟೆ ತಿಳಿಸಿದ್ದಾರೆ.

 




PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *