ಜಿಲ್ಲೆ

ಹಿಜಬ್ ಕುರಿತು ಹೈಕೋರ್ಟ್ ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ ಎಂದ ಶ್ರೀರಾಮಸೇನೆ

ಧಾರವಾಡ prajakiran.com : ಹಿಜಬ್ ಕುರಿತು ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಿಜಾಬ್ ಸಂಬಂಧಿಸಿದಂತೆ ರಾಜ್ಯಾದ್ಯಂತ ಹಲವು ಅಹಿತಕರ ಘಟನೆಗಳು ನಡೆಯುತ್ತಿದ್ದು ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶ್ರೀ ರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಮ ಸೇನೆ ತಾಲೂಕು ಅಧ್ಯಕ್ಷ ಮೈಲಾರ ಗುಂಡಪ್ಪನವರ, ವಿದ್ಯಾರ್ಥಿ ಘಟಕದ ಅಧ್ಯಕ್ಷ ವಿಶ್ವಾಸ ನಾಗಶೇಟ್ಟಿ, ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಕಾಟ್ಕರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *