ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.
ಸೋಂಕಿತರ ಸಂಖ್ಯೆ ಭಾನುವಾರ ಮತ್ತೆ ಸಾವಿರ ಗಡಿ ಸಮೀಪಿಸಿದೆ.
ಇಂದು ಮತ್ತೆ ಬರೋಬ್ಬರಿ 937 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ.
ದುರಂತದ ಸಂಗತಿಯೆಂದರೆ ಇಂದು ಕೂಡ 9 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ 7 ಹಾಗೂ ಧಾರವಾಡದ ಎಸ್ ಡಿಎಂ ಮತ್ತು ಶ್ರೇಯಾ ಆಸ್ಪತ್ರೆಯಲ್ಲಿ ತಲಾ ಒಬ್ಬರು ಕೋವಿಡ್ ಗೆ ಚಿಕಿತ್ಸೆ ಫಲಿಸದೆ
ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ 545 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5739 ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ 887 ಸೋಂಕಿತರು ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.