ಆಧ್ಯಾತ್ಮ

ಭಾನುವಾರದ ಕರ್ಫ್ಯೂ ತೆರವುಗೊಳಿಸಿ ಧಾರವಾಡ ಜಿಲ್ಲಾಧಿಕಾರಿ ಆದೇಶ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಮೇ ೩೦ ರ ಸಂಜೆ.೭ ರಿಂದ ಜೂನ್ ೧ ರ ಬೆಳಿಗ್ಗೆ ೭ ಗಂಟೆಯವರೆಗೆ ಮುಂಜಾಗೃತ ಕ್ರಮವಾಗಿ ಕರ್ಫ್ಯೂ ಜಾರಿ ಮಾಡಿ ಆದೇಶಿಸಲಾಗಿತ್ತು.

ಆದರೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆದೇಶದಂತೆ, ಭಾನುವಾರದಂದು ಪೂರ್ಣ ದಿನದ ಲಾಕ್‌ಡೌನ್ ಎಂದು ಆದೇಶಿಸಲಾಗಿರುವುದನ್ನು ಮಾರ್ಪಡಿಸಲಾಗಿದೆ.

ಮೇ.೩೧ ರಂದು ಬೆಳಿಗ್ಗೆ ೭ ರಿಂದ ರಾತ್ರಿ ೭ ರವರೆಗೆ ವಿಧಿಸಿದ್ದ ಕರ್ಫ್ಯೂವನ್ನು ತೆರವುಗೊಳಿಸಿ ವಿನಾಯಿತಿ ನೀಡಿ ಆದೇಶಿಸಲಾಗಿದೆ.

ಭಾನುವಾರ ರಾತ್ರಿ ೭ ಗಂಟೆಯಿಂದ ಬೆಳಿಗ್ಗೆ ೭ ಗಂಟೆಯವರೆಗೆ ಮಾತ್ರ ಯಥಾಪ್ರಕಾರ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಧಾರವಾಡ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ದೀಪಾ ಚೋಳನ್ ಆದೇಶಿಸಿದ್ದಾರೆ.

ಇದರಿಂದಾಗಿ ವ್ಯಾಪಾರಸ್ಥರು ಹಾಗೂ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಭಾನುವಾರವೂ ಎಂದಿನಂತೆ ವ್ಯಾಪಾರ ವಹಿವಾಟು ನಡೆಯಲಿದೆ.

ಆದರೆ ಜನತೆ ಸಾಮಾಜಿಕಅಂತರ ಕಾಪಾಡಿಕೊಂಡು ಮಾಸ್ಕ್ ಹಾಗೂ ಸ್ಯಾನಿಟೇಸರ್ ಬಳಸುವುದು ಕಡ್ಡಾಯವಾಗಿದೆ.

ಅದನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಧಾರವಾಡ ಜಿಲ್ಲಾಡಳಿತಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *