ಕೇಂದ್ರ & ರಾಜ್ಯ ಸರ್ಕಾರಗಳಿಗೆ ಕೋರ್ಟ್ ಸಲಹೆ
ನವದೆಹಲಿ Prajakiran.com : ದೇಶದಲ್ಲಿ ಕೊರೋನಾ ಎರಡನೇ ಅಲೆಯನ್ನು ತಡೆಗಟ್ಟಲು ಲಾಕ್ ಡೌನ್ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.
ಭಾರತದಲ್ಲಿ ಕೊರೋನಾ ಸೋಂಕು ಅತಿ ವೇಗವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ರೋಗಿಗಳನ್ನು ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲು ಅಥವಾ ತುರ್ತು ವೈದ್ಯಕೀಯ ನೆರವು ನೀಡಲು ನಿರಾಕರಿಸಬಾರದು ಎಂದು ಈ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕೊರೋನಾ ಸೋಂಕಿತ ರೋಗಿಗಳ ದಾಖಲಾತಿ ಕುರಿತಂತೆ ಎರಡು ವಾರಗಳಲ್ಲಿ ರಾಷ್ಟ್ರೀಯ ನೀತಿಯನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ನ ಜಸ್ಟೀಸ್ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.