ರಾಜ್ಯ

ಮಾಜಿ ಸಚಿವ ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಭಾರೀ ಹಿನ್ನೆಡೆ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಪಂ ಬಿಜೆಪಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಭಾರೀ ಹಿನ್ನೆಡೆಯಾಗಿದೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಸೋಮವಾರ ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಸಿಬಿಐ ತಮ್ಮ ವಿರುದ್ದ ದಾಖಲಿಸಿದ ಪ್ರಕರಣವನ್ನು ರದ್ದುಗೊಳಿಸಿ ಎಂದು ಹೈಕೋರ್ಟ್ ಮೊರೆ ಹೋಗಿದ್ದರು.

ಆಗ ಹೈಕೋರ್ಟ್ ತನಿಖೆಯನ್ನು ಎದುರಿಸಿ ಎಂದು ಆದೇಶ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ನಲ್ಲಿ  ಅರ್ಜಿ ಸಲ್ಲಿಸಿದ್ದರು.

ಸಿಬಿಐ ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಇದೀಗ ಸುಪ್ರೀಂ ಕೋರ್ಟ್‌ ಕೂಡ ಎತ್ತಿ ಹಿಡಿದು ವಿನಯ ಕುಲಕರ್ಣಿ ರಿಟ್ ಅರ್ಜಿ ವಜಾಗೊಂಡಿದೆ.

ಇದರಿಂದಾಗಿ ಸುಪ್ರೀಂ ಕೋರ್ಟ್‌ನಲ್ಲಿಯೂ ವಿನಯ ಕುಲಕರ್ಣಿ ಗೆ ಹಿನ್ನೆಡೆಯಾಗಿದೆ. ಪ್ರಕರಣದಲ್ಲಿ ಈಗಾಗಲೇ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನಿನ ಮೇಲೆ‌ ಹೊರಗಿರುವುದನ್ನು ಇಲ್ಲಿ ಸ್ಮರಿಸಬಹುದು‌

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *