ಜಿಲ್ಲೆ

ಚುನಾವಣಾ ಕರ್ತವ್ಯಲೋಪ ; ಆರೋಗ್ಯ ನಿರೀಕ್ಷಣಾಧಿಕಾರಿ ಎ.ಎ. ಅಳವಂಡಿ ಅಮಾನತು

ಧಾರವಾಡ ಪ್ರಜಾಕಿರಣ.ಕಾಮ್ ಮೇ.05: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆಗಿರುವ ಎ.ಎ. ಅಳವಂಡಿ ಅವರು ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯಲೋಪ ಮಾಡಿದ್ದಾರೆ.

ಜೊತೆಗೆ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ  ಆದೇಶ ಹೊರಡಿಸಿದ್ದಾರೆ.

 ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 28(ಎ) ರಡಿ ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1957 ರ ನಿಯಮ 10(1) (ಡಿ) ಪ್ರಕಾರ ಎ.ಎ. ಅಳವಂಡಿ ಅವರ ಮೇಲಿನ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ.

ಅಮಾನತ್ತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ. 

ಅಮಾನತ್ತು ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ 1958 ರ ನಿಯಮ 98 ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *