ಅಂತಾರಾಷ್ಟ್ರೀಯ

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕುರಿತ ಸಿನಿಮಾ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

ನವದೆಹಲಿ prajakiran.com : ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನ ಕಥೆಯನ್ನಾಧರಿಸಿದ “ನ್ಯಾಯ್, ದಿ ಜಸ್ಟೀಸ್” ಚಿತ್ರದ ಬಿಡುಗಡೆಗೆ ತಡೆ ನೀಡಬೇಕೆಂಬ ಸುಶಾಂತ್ ತಂದೆ ಕಿಶೋರ್ ಸಿಂಗ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

“ನ್ಯಾಯ್,ದಿ ಜಸ್ಟೀಸ್” ಸಿನಿಮಾ ನಾಳೆ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸುಶಾಂತ್ ತಂದೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಈ ಸಿನಿಮಾವನ್ನು ಕುಟುಂಬದ ಒಪ್ಪಿಗೆ ಪಡೆಯದೆ ನಿರ್ಮಿಸಲಾಗಿದೆ ಹಾಗೂ ಸುಶಾಂತ್ ಆತ್ಮಹತ್ಯೆಯಲ್ಲಿ ವಿಶ್ವಾಸಿಗರ ಪಾತ್ರವಿದೆ ಎನ್ನುವಂತೆ ಚಿತ್ರಮಾಡಲಾಗಿದೆ ಎಂದು ಕಿಶೋರ್ ಸಿಂಗ್ ಅರ್ಜಿಯಲ್ಲಿ ಆರೋಪಿಸಿದ್ದರು.

ಸಿನಿಮಾ ಹೊಣೆಗಾರಿಕೆ ಬಗ್ಗೆ ಜವಾಬ್ದಾರಿಯಿಂದ ಇರುವಂತೆ ನಿರ್ಮಾಪಕರಿಗೆ ನ್ಯಾಯಮೂರ್ತಿ ಸಂಜೀವ್ ನರುಲಾ ನೇತೃತ್ವದ ಪೀಠ ಸೂಚನೆ ನೀಡಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *