ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಸಂಜೆ ಮತ್ತೆ ಹೊಸದಾಗಿ 71 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1159 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಚಿಕಿತ್ಸೆ ಫಲಿಸದೆ ಐವರು ಸಾವನ್ನಪ್ಪಿದ್ದರೆ, ಈವರೆಗೆ 38 ಜನ ಸಾವನ್ನಪ್ಪಿದ್ದಾರೆ. ಭಾನುವಾರ 36 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 418 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 703 ಸಕ್ರಿಯ […]