ರಾಜ್ಯ

ಧಾರವಾಡ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಸೇರಿ ಹಲವರ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಭಾನುವಾರ ಧಾರವಾಡ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಸೇರಿ ಹಲವರ ವಿಚಾರಣೆ ನಡೆಸಿದರು. ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿದ ಶಿವಾನಂದ ಕರಿಗಾರ ಅವರನ್ನು  ಗಂಟೆಗಳಿಗೂ ಅಧಿಕ ಕಾಲ ಸಿಬಿಐ ಅಧಿಕಾರಿಗಳ ತಂಡ ವಿಚಾರಣೆ ನಡೆಸಿ ಹತ್ತು ಹಲವು ಪ್ರಶ್ನೆಗಳ ಮೂಲಕ ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದರು ಎನ್ನಲಾಗಿದೆ. ಇದೇ ವೇಳೆ ಭಾನುವಾರ ಕೂಡ ಅನೇಕರು […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎರಡನೇ ದಿನವೂ ಕಾಂಗ್ರೆಸ್ ಮುಖಂಡ ಸೇರಿ ಹಲವರ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣ ಕುರಿತು ಸಿಬಿಐ ಅಧಿಕಾರಿಗಳ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಶಿಗ್ಗಾಂವಿಯ ಕಾಂಗ್ರೆಸ್ ಮುಖಂಡ ಶಿವಯೋಗಿ ಹಿರೇಮಠ ನನ್ನು ಎರಡನೇ ದಿನವೂ  ವಿಚಾರಣೆ ನಡೆಸಿದ ಸಿಬಿಐ ತಂಡ ಮಹತ್ವದ ಮಾಹಿತಿ ಕಲೆ ಹಾಕಿದೆ. ಬುಧವಾರವೂ ಸಂಜೆ ವೇಳೆ ವಿಚಾರಣೆಗೆ ಆಗಮಿಸಿದ್ದ ಹಿರೇಮಠನನ್ನು ಗುರುವಾರವೂ ವಿಚಾರಣೆ ಮುಂದುವರೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಇದೇ ವೇಳೆ ಹುಬ್ಬಳ್ಳಿಯ ಮಹಿಳೆಯೊಬ್ಬರನ್ನು ಸಿಬಿಐ ಅಧಿಕಾರಿಗಳು ಒಂದು ಗಂಟೆಗೂ ಅಧಿಕ ಕಾಲ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ ನಡೆದಿದೆ ಅಂದಿನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ, ಡಿಸಿಪಿಗಳಾದ ಮಲ್ಲಿಕಾರ್ಜುನ ಬಾಲದಂಡಿ, ಜಿನೇಂದ್ರ ಖಣಗಾವಿ, ಧಾರವಾಡ ಎಸಿಪಿ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಗಳಾದ ಚನ್ನಕೇಶವ ಟಿಂಗರಿಕರ್ ಹಾಗೂ ಮೋತಿಲಾಲ್ ಪವಾರ್ ಸೇರಿ ಹಲವು ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಎಸಿಪಿ, ಇನ್ಸಪೆಕ್ಟರ್ ಸೇರಿ 6 ಜನರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಧಾರವಾಡ ಎಸಿಪಿ ಹಾಗೂ ಸದ್ಯ ಗದಗ ಎಸಿಬಿ ಡಿವೈಎಸ್ಪಿ ಆಗಿರುವ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ಸೇರಿ ಆರು ಜನ ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಗಂಗಾನಗರದಲ್ಲಿರುವ ಸಿಬಿಐ ಕಚೇರಿಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ಆರಂಭಿಸಿ ರಾತ್ರಿಯವರೆಗೆ ವಿಚಾರಣೆ ನಡೆಸಿದರು ಎಂದು ಗೊತ್ತಾಗಿದೆ. 2016ರ […]

ರಾಜ್ಯ

ಧಾರವಾಡ : ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡದ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಶುಕ್ರವಾರ ಹಲವರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದರು. ಅದರಲ್ಲೂ ವಿಶೇಷವಾಗಿ ಈ ಹಿಂದೆ ಧಾರವಾಡದ ಉಪನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಆಗಿದ್ದ ಮೋತಿಲಾಲ್ ಪವಾರ್ ಅವರನ್ನು ಹಲವು ಗಂಟೆಗಳ ಕಾಲ ಸಿಬಿಐ ತೀವ್ರ ವಿಚಾರಣೆ ನಡೆಸಿದರು. ಇವರು ಯೋಗೀಶ್ ಗೌಡರ ಕೊಲೆ ಪ್ರಕರಣದ ಕುರಿತು ನ್ಯಾಯಾಲಯಕ್ಕೆ ಚಾರ್ಜ್ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಹಲವರ ತೀವ್ರ ವಿಚಾರಣೆಗೊಳಪಡಿಸಿದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಹಲವರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸುತ್ತಿದ್ದಾರೆ. ಶುಕ್ರವಾರವೂ ವಿಚಾರಣೆ ಮುಂದುವರೆದಿದೆ. ಗುರುವಾರ ನಿವೃತ್ತ ಡಿವೈಎಸ್‌ಪಿ ಅವರ ಮಗ ಕಿರಣ ವೀರನಗೌಡ ಅವರನ್ನು ಹಲವು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು ಎಂದು ಗೊತ್ತಾಗಿದೆ. ಈತ ಪೊಲೀಸ್ ಇಲಾಖೆಯ ಹಿರಿಯಅಧಿಕಾರಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಎಂದು ತಿಳಿದುಬಂದಿದೆ. ಈ ಹಿಂದಿನ […]

ರಾಜ್ಯ

ಡಿವೈಎಸ್ಪಿ ಚಂದ್ರಶೇಖರ ವಿಚಾರಣೆ ನಡೆಸಿದ ಸಿಬಿಐ : ಪೊಲೀಸ್ ಅಧಿಕಾರಿಗಳಿಗೆ ಮುಂದುವರೆದ ಡ್ರಿಲಿಂಗ್

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡದ  ಕೆಲವು ಪೊಲೀಸರಿಗೆ ಬಿಸಿ ತಾಕಿಸಿದ್ದಾರೆ. ಧಾರವಾಡದ ಉಪನಗರ ಠಾಣೆಯಲ್ಲಿ ಕಳೆದ ಹಲವು ದಿನಗಳಿಂದ ಬೀಡು ಬಿಟ್ಟಿರುವ ಸಿಬಿಐ ಅಧಿಕಾರಿಗಳ ತಂಡ ಬೆಳಗ್ಗೆಯಿಂದ ಸಂಜೆಯವರೆಗೆ ಹಲವರನ್ನು ಕರೆಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಈ ಪ್ರಕರಣದಲ್ಲಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ರಾಜೀ ಸಂಧಾನಕ್ಕೆ ಯತ್ನಿಸಿದ್ದ ಆರೋಪಕೇಳಿ ಬಂದಿದ್ದ ಧಾರವಾಡದ ಡಿವೈಎಸ್ಪಿ ಹಾಗೂ ಪ್ರಸ್ತುತ ಬೀದರ ಜಿಲ್ಲೆಯ […]

ರಾಜ್ಯ

ಡಿವೈಎಸ್ಪಿ ತುಳಜಪ್ಪ ಸುಲ್ಫಿ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳ ತಂಡ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‌ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೇ ಸಿಬಿಐ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ತನಿಖೆ ಮುಂದುವರೆದಿದ್ದು, ಈ ಹಿಂದೆ ಬೆಳಗಾವಿಯ ಉತ್ತರ ವಲಯದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿದ್ದ ಡಿವೈಎಸ್ಪಿ ತುಳಜಪ್ಪ ಸುಲ್ಫಿಯನ್ನು ಹಲವು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದರು. ತುಳಜಪ್ಪ ಸುಲ್ಪಿ ಸದ್ಯ ವಿಜಯಪುರ ಡಿವೈಎಸ್ಪಿಯಾಗಿದ್ದು, ಅವರು ಯೋಗೀಶಗೌಡ ಸಹೋದರ ಗುರುನಾಥ ಗೌಡ ಗೌಡರ ಮೇಲೆ ರಾಜೀಸಂಧಾನಕ್ಕೆ ಒತ್ತಡ […]