ರಾಜ್ಯ

ಧಾರವಾಡದಲ್ಲಿ ಕರೋನಾ ನಿಯಂತ್ರಣಕ್ಕೆ ಐವರು ಮಹಿಳಾ ವೈದ್ಯಾಧಿಕಾರಿಗಳ ಸಾಥ್

ಧಾರವಾಡ prajakiran.com : ತೊಟ್ಟಿಲು ತೂಗುವ ಕೈ ಜಗತ್ತನ್ನೇ ತೂಗಬಲ್ಲದು. ಮಹಿಳೆ ಅಬಲೆಯಲ್ಲ, ಆಕೆ ಪುರುಷನಷ್ಟೇ ಸಬಲಳು ಎಂಬುದನ್ನು ಧಾರವಾಡ ಜಿಲ್ಲೆಯ ಐವರು ಮಹಿಳಾ ವೈದ್ಯಾಧಿಕಾರಿಗಳು ಸಾಬೀತುಪಡಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಲ್ಲಿ ಕಳೆದ ಸುಮಾರು ಮೂರುವರೆ ತಿಂಗಳಿನಿಂದ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಸಮರ್ಥವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಜಗತ್ತನ್ನೇ ತಲ್ಲಣಗೊಳಿಸಿರುವ ಕರೊನಾ ವೈರಾಣು ಎಂತಹ ಜಗಜಟ್ಟಿಗಳನ್ನೂ ಕೂಡಾ ನಡುಗಿಸಿದೆ. ಕರೊನಾ ವಿರುದ್ಧದ ಈ ಹೋರಾಟದಲ್ಲಿ ಕೊಂಚವೂ ಹಿಂಜರಿಯದೇ ಮುನ್ನುಗ್ಗಿರುವ ಮಹಿಳಾ ಕೊರೊನಾ […]