ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರವೂ 8 ಸಾವು, 184 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ   184 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4275 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶನಿವಾರವು  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  139ಕ್ಕೆ ಏರಿದಂತಾಗಿದೆ.   ಶನಿವಾರ ಜಿಲ್ಲೆಯಲ್ಲಿ  […]

ರಾಜ್ಯ

ಧಾರವಾಡದಲ್ಲಿ ಒಂಬತ್ತು ದಿನಗಳ ಬಳಿಕ ಸೀಲ್ ಡೌನ್ ಗೆ ಬಂದ ಸಿಬ್ಬಂದಿ

ಧಾರವಾಡ prajakiran.com  :  ಧಾರವಾಡದಲ್ಲಿ ಆರೋಗ್ಯ ಇಲಾಖೆ ಪದೆ ಪದೇ  ಯಡವಟ್ಟು ಮಾಡುತ್ತಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋವಿಡ್‌ನಿಂದ ಒಬ್ಬ ವ್ಯಕ್ತಿ ಸತ್ತು ಅಂತ್ಯ ಸಂಸ್ಕಾರದ ಬಳಿಕವೂ ಆರಾಮ ಇದಾರಾ ಅಂತಾ ಕರೆ ಬಂದಿರುವುದು ಕೇಳಿ ಮನೆ ಮಂದಿಯಲ್ಲಾ ಆತಂಕಗೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಆಗಿದೆ. ಅಲ್ಲದೆ, ಆಕ್ರೋಶದ ಕಟ್ಟೆಯೂ ಒಡೆದು ಹೋಗಿದೆ. ಧಾರವಾಡದ ಮೃತ್ಯುಂಜಯ ನಗರ ಕೊಟ್ಟಣದ ಓಣಿಯ ನಿವಾಸಿಯೊಬ್ಬರು ಕೋವಿಡ್‌ನಿಂದ ಜುಲೈ 24ರಂದು ನಿಧನವಾಗಿದ್ದರು. ಆ ವ್ಯಕ್ತಿಯ […]

ರಾಜ್ಯ

ರಾಜ್ಯದಲ್ಲಿ  ಶುಕ್ರವಾರ  ಸೋಂಕಿಗೆ ಬರೋಬ್ಬರಿ 84 ಸಾವು, 5483 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 84 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5483 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,24,115 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3130 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  49788 ಜನ ಗುಣಮುಖರಾಗಿದ್ದು72005 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 609 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಶುಕ್ರವಾರವೂ 84 […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ 7 ಸಾವು, 180 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 180 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4091 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  131ಕ್ಕೆ ಏರಿದಂತಾಗಿದೆ.   ಶುಕ್ರವಾರ ಜಿಲ್ಲೆಯಲ್ಲಿ  […]

ರಾಜ್ಯ

ಧಾರವಾಡದಲ್ಲಿ ಕರೊನಾ ಟೆಸ್ಟ್ ಗೆ ಹೆದರಿ ಅಂಗಡಿ ಬಂದ್ ಮಾಡಿದ ವ್ಯಾಪಾರಸ್ಥರು…!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕರೊನಾ ಟೆಸ್ಟ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗುರುವಾರ ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಹಾಗೂ ಧಾರವಾಡದ ಸುಭಾಸ ರಸ್ತೆಯಲ್ಲಿ ನೂರಾರು ವ್ಯಾಪಾರಸ್ಥರನ್ನು ಕರೊನಾ ಟೆಸ್ಟ್ ಗೆ ಒಳಪಡಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮುಂದೆ ನಿಂತು ವ್ಯಾಪಾರಿಗಳನ್ನು ಕರೆಸಿ ಸಂಚಾರ ವಾಹನದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕರೊನಾ ಟೆಸ್ಟ್ ಮಾಡಿಸಿದ್ದಾರೆ. ಇದರಿಂದಾಗಿ ದುರ್ಗದ ಬೈಲ್‌ನಲ್ಲಿ 100ಕ್ಕೂ ಹೆಚ್ಚು ವ್ಯಾಪಾರಿಗಳ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ […]

ರಾಜ್ಯ

ಧಾರವಾಡದ ಸಾಧನಕೇರಿ, ದಾಂಡೇಲಿ ನಿವಾಸಿ ಸೇರಿ ಎಂಟು ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಎಂಟು ಜನ ಕಳೆದ ಆರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ  ನಿವಾಸಿ ಪಿ-64647 ( 74,ಮಹಿಳೆ), ಹುಬ್ಬಳ್ಳಿಯ ಕಮಡೊಳ್ಳಿ ಗಲ್ಲಿ  ನಿವಾಸಿ  ಪಿ-82942 (64,ಮಹಿಳೆ), ಹುಬ್ಬಳ್ಳಿ ಆಜಾದ್ ರಸ್ತೆಯ ನಿವಾಸಿ ಪಿ-73492 (71,ಪುರುಷ), ಹುಬ್ಬಳ್ಳಿ ಮಂಗಳಾ ಓಣಿ  ನಿವಾಸಿ ಪಿ-60017 (84, […]

ರಾಜ್ಯ

ರಾಜ್ಯದಲ್ಲಿ ಬುಧವಾರ ಸೋಂಕಿಗೆ ಬರೋಬ್ಬರಿ 92 ಸಾವು, 5503 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಬುಧವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 92 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5503 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2397 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  42901 ಜನ ಗುಣಮುಖರಾಗಿದ್ದು, 67,448 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 639 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 3.5 ಸಾವಿರ ಗಡಿ ದಾಟಿದ ಕರೋನಾ : ಇದುವರೆಗೆ 1453 ಗುಣಮುಖ….!

ಧಾರವಾಡ prajakiran.com  :  ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿರುವ ಕರೋನಾ ಸೋಂಕು ಪ್ರತಿ ದಿನ 200 ರ ಗಡಿ ಸಮೀಪಿಸುತ್ತಲೇ ಇರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಶ್ರಾವಣ ಮಾಸದ ಆರಂಭದಲ್ಲಿಯೇ ಇಂತಹ ಸಂಕಷ್ಟ, ಸವಾಲು ಎದುರಾಗಿರುವುದು ಜಿಲ್ಲೆಯ ಜನತೆಗೆ ಇದು ಬಿಗ್ ಶಾಕ್ ನೀಡಿದ್ದು, ಜನತೆ ಕಂಗಾಲಾಗಿ ಹೋಗಿದ್ದಾರೆ.   ಇದಲ್ಲದೆ, ಧಾರವಾಡ ಜಿಲ್ಲಾಡಳಿತ ಎಷ್ಟೇ ಪ್ರಯತ್ನ ಪಟ್ಟು ಇದಕ್ಕೆ ಕಡಿವಾಣ ಹಾಕಲು ಹತ್ತು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ […]

ರಾಜ್ಯ

ಧಾರವಾಡ ಜಿಲ್ಲೆಯ ಗರಗ, ಬ್ಯಾಹಟ್ಟಿ, ಇಂಗಳಹಳ್ಳಿ ಸೇರಿ ಹಲವು ಹಳ್ಳಿಗಳಿಗೆ ವ್ಯಾಪಿಸಿದ ಕರೋನಾ

3553 ಕ್ಕೇರಿದ ಕೋವಿಡ್ ಪ್ರಕರಣಗಳು : 1991  ಪ್ರಕರಣಗಳು ಸಕ್ರಿಯ 1453 ಜನ ಗುಣಮುಖ ಬಿಡುಗಡೆ ಈವರೆಗೆ ಒಟ್ಟು 109ಜನ ಸಾವು ಧಾರವಾಡ  :  ಜಿಲ್ಲೆಯಲ್ಲಿ ಮಂಗಳವಾರ 173 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3553 ಕ್ಕೆ ಏರಿದೆ. ಇದುವರೆಗೆ 1453 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1991  ಪ್ರಕರಣಗಳು ಸಕ್ರಿಯವಾಗಿವೆ. 34  ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 109ಜನ ಮೃತಪಟ್ಟಿದ್ದಾರೆ . ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. […]

ರಾಜ್ಯ

ರಾಜ್ಯದಲ್ಲಿ ಮಂಗಳವಾರ ಸೋಂಕಿಗೆ ಬರೋಬ್ಬರಿ 102 ಸಾವು, 5536 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 102 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 5536 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,07,001 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 2819ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  40504 ಜನ ಗುಣಮುಖರಾಗಿದ್ದು, 64,434 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 612 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಮಂಗಳವಾರವೂ […]