ಗದಗ prajakiran.com : ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಬುಕ್ಕಿ ಹಾಗೂ ಬೆಟ್ಟಿಂಗ್ ನಡೆಸುತ್ತಿದ್ದ ಐವರನ್ನು ಬಂಧಿಸಿದ ಘಟನೆ ಗದಗನಲ್ಲಿ ನಡೆದಿದೆ. ಬುಧವಾರ ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ರಿಂಗ್ ರಸ್ತೆಯ ಕಳಸಾಪುರ ರಸ್ತೆಯ ಬಾಲಾಜಿನಗರ ಕ್ರಾಸ್ ಹತ್ತಿರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ 1,56,320/- ನಗದು ಹಣ ಹಾಗೂ 6 ಮೊಬೈಲ್ ಸಿಕ್ಕಿದ್ದು, ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮಾಹಿತಿ ಮೇರೆಗೆ ಗದಗ […]