ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ಅಪಾರ ಪ್ರಮಾಣದ ಬೆಳೆ ಹಾನಿ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಅಪಾರ ಪ್ರಮಾಣದ ಮಳೆಯಿಂದಾಗಿ ಸಾಕಷ್ಟು ಬೆಳೆಹಾನಿಯಾಗಿದೆ. ಕಷ್ಟಪಟ್ಟು ರೈತ ಬೆಳೆದ ಬೆಳೆಗಳು ಸಂಪೂರ್ಣ ನೀರಿನಿಂದ ಜಲಾವೃತವಾಗಿದ್ದು, ಗದ್ದೆಗಳು ಕೆರೆಗಳಂತಾಗಿವೆ. ನಿರಂತರ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಅನ್ನದಾತನಿಗೆ ಕೈ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಅದರಲ್ಲೂ ವಿಶೇಷವಾಗಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕಿನಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ‌ ಜಿಲ್ಲೆಯ ರೈತನ ಬದುಕುಮೂರಾಬಟ್ಟೆಯಾಗಿದ್ದು, ಶೇಂಗಾ, ಹೆಸರು, ಸೋಯಾಬಿನ್ ಸೇರಿದಂತೆ […]

ರಾಜ್ಯ

ಧಾರವಾಡ ರೈತರಿಂದಲೇ ಬೆಳೆ ಸಮೀಕ್ಷೆ ಆರಂಭ

ಧಾರವಾಡ prajakiran.com :  ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಛಾಯಾಚಿತ್ರ ಸಹಿತ ೨೦೨೦ ರ ಮುಂಗಾರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ದಾಖಲಾತಿ ದಾಖಲಿಸುವ ವಿನೂತನ ಯೋಜನೆಗೆ ಧಾರವಾಡ ಜಿಲ್ಲಾಡಳಿತ, ಕೃಷಿ ಇಲಾಖೆ, ಜಿಲ್ಲಾ ಪಂಚಾಯತಿ ಚಾಲನೆ ನೀಡಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸುವ ಮೂಲಕ ರೈತರೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‌ನ್ನು ಆ್ಯಂಡ್ರಾಯ್ಡ್ ಸ್ಮಾರ್ಟ್ ಮೋಬೈಲ್‌ಗಳಲ್ಲಿ […]