ಜಿಲ್ಲೆ

ಧಾರವಾಡ ಜಿಲ್ಲೆಯ ಮತದಾರರ ಕರಡು ಯಾದಿ ಪ್ರಕಟ

ಧಾರವಾಡ prajakiran.com:  ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಧಾರವಾಡ ಜಿಲ್ಲೆಯಲ್ಲಿನ ೭ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ–೨೦೨೧ ನೇದ್ದಕ್ಕೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ : ೦೧–೦೧–೨೦೨೧ ಕ್ಕೆ ಇದ್ದಂತೆ ದಿನಾಂಕ:೧೮–೧೧–೨೦೨೦ ರಂದು ಕರಡು ಮತದಾರರ ಯಾದಿಯನ್ನು ಜಿಲ್ಲೆಯಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಸದರಿ ಕರಡು ಮತದಾರರ ಯಾದಿಯನ್ನು ಜಿಲ್ಲೆಯ ಎಲ್ಲ ಚುನಾವಣೆ ಶಾಖೆಗಳು, ತಹಶೀಲ್ದಾರ ಕಛೇರಿಗಳು ಮತ್ತು ಗ್ರಾಮ ಠಾಣಾಗಳಲ್ಲಿ ನವೆಂಬರ್ ೧೮, […]

ರಾಜ್ಯ

ಧಾರವಾಡ ಜಿಲ್ಲಾಧಿಕಾರಿಯಿಂದ ಮಾಸ್ಕ್ ಧರಿಸದವರಿಗೆ ಕೊರೊನಾ ತಪಾಸಣೆ, ದಂಡ

ಧಾರವಾಡ prajakiran.com : ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ನಗರದ ವಿವಿಧೆಡೆ ಮಾಸ್ಕ್ ಧರಿಸದವರಿಗೆ ದಂಡ, ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭವಾಗಿದೆ. ಧಾರವಾಡದ ಸಿಬಿಟಿ, ಅಕ್ಕಿಪೇಟೆ, ಸುಭಾಷ್ ರಸ್ತೆ, ಗಾಂಧಿಚೌಕ, ವಿವೇಕಾನಂದ ವೃತ್ತ, ಮಾರುಕಟ್ಟೆ ಮತ್ತಿತರ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಸಾರ್ವಜನಿಕರನ್ನು ಗುರುತಿಸಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ನಡೆಸಿದರು. ಅಲ್ಲದೆ, ಸಾರ್ವಜನಿಕರಿಗೆ ಮಾಸ್ಕ್ ಧರಿಸುವುದರ ಮಹತ್ವ ಮನವರಿಕೆ ಮಾಡಿಕೊಟ್ಟರು. ಹಾಗೂ ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದ ವಾಹನ ಸವಾರರು, ಆಟೋ, […]

ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೬ ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕ ಕಾರ್ಯಾರಂಭ

ಧಾರವಾಡ prajakiran.com : ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ೬ ಸಾವಿರ ಲೀಟರ್ ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆಯ ಘಟಕಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಇದುವರೆಗೆ ಪ್ರತಿದಿನ ೮೦ ರಿಂದ ೧೦೦ ಜಂಬೋ ಆಕ್ಸಿಜನ್ ಸಿಲಿಂಡರುಗಳನ್ನು ವೈದ್ಯಕೀಯ ಚಿಕಿತ್ಸೆಗೆ ಬಳಸಲಾಗುತ್ತಿತ್ತು. ಇವುಗಳನ್ನು ಪ್ರತಿದಿನ ಪೂರೈಕೆದಾರರ ಬಳಿ ತೆಗೆದುಕೊಂಡು ಹೋಗಿ ತುಂಬಿಸಿಕೊAಡು ಬರಬೇಕಾಗಿತ್ತು. ಈಗ ೬ ಸಾವಿರ ಲೀಟರ್ ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆ ಘಟಕ ಸ್ಥಾಪನೆಯಿಂದ […]

ಜಿಲ್ಲೆ

ಧಾರವಾಡದಲ್ಲಿ ಸೆ.೨೧ ರಿಂದ ಹೆಸರು, ಉದ್ದು ಬೆಂಬಲ ಬೆಲೆ ಖರೀದಿ ಯೋಜನೆಯಡಿ ನೋಂದಣಿ ಪ್ರಾರಂಭ  

ಧಾರವಾಡ prajakiran.com :  ೨೦೨೦-೨೧ ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಹಾಗೂ ಉದ್ದಿನಕಾಳನ್ನು ಜಿಲ್ಲೆಯ ರೈತರಿಂದ ಖರೀದಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸೋಮವಾರ ಸೆ.೨೧ ರಿಂದ ರೈತರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಟಾಸ್ಕಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳನ್ನು ಪ್ರತಿ ಕ್ವಿಂಟಲ್ ಗೆ […]

ಜಿಲ್ಲೆ

ಸೆ.೭ ರಿಂದ ೧೯ ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಧಾರವಾಡ prajakiran.com : ಸೆಪ್ಟೆಂಬರ್ ೦೭ ರಿಂದ ೧೯, ೨೦೨೦ ರ ವರೆಗೆ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗಳು ಜಿಲ್ಲೆಯಾದ್ಯಂತ ನಡೆಯಲಿವೆ. ಪರೀಕ್ಷಾ ಸಮಯವಾದ ಬೆಳಿಗ್ಗೆ ೧೦-೧೫ ರಿಂದ ಮಧ್ಯಾಹ್ನ ೧-೩೦ರ ವರೆಗೆ ಹಾಗೂ ಮಧ್ಯಾಹ್ನ ೨-೧೫ ರಿಂದ ಸಂಜೆ ೫-೩೦ ರ ವರೆಗೆ ಕುಂದಗೋಳ, ನವಲಗುಂದ ಮತ್ತು ಕಲಘಟಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಧ್ವನಿವರ್ಧಕಗಳ ನಿಷೇಧ ಹಾಗೂ ಸಮೀಪದ ಝೆರಾಕ್ಸ್ ಅಂಗಡಿಗಳು […]