dist hospital dharwad
ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವು, ಪ್ರತಿಭಟನೆ ಬಿಸಿ

ಧಾರವಾಡ prajakiran.com : ಧಾರವಾಡ ಜಿಲ್ಲಾಸ್ಪತ್ರೆ ವೈದ್ಯರ  ನಿರ್ಲಕ್ಷ್ಯದಿಂದ ನವಜಾತ ಶಿಶುವೊಂದು ಸಾವನ್ನಪ್ಪಿದ್ದ ಆರೋಪ ಕೇಳಿಬಂದಿದೆ. ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತನ್ನ ಪತ್ನಿ ಹೆರಿಗೆ ಸಮಯದಲ್ಲಿ ಜಿಲ್ಲಾಸ್ಪತ್ರೆಯ ವೈದ್ಯರು ಬೇಜಾವಾಬ್ದಾರಿತನ ಮೆರೆದಿದ್ದಾರೆ ಎಂದು ಆಕೆಯ ಪತಿ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದಾಗಿ ಧಾರವಾಡ ಜಿಲ್ಲೆಯ ಮುಗದ ಗ್ರಾಮದ ಮಹಿಳೆ  ಪೂಜಾ ಪೂಜಾರಿಗೆ ಅನ್ಯಾಯವಾಗಿದೆ ಎಂದು ದೂರಿದ್ದಾರೆ. ನಿನ್ನೆ […]

ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೬ ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಘಟಕ ಕಾರ್ಯಾರಂಭ

ಧಾರವಾಡ prajakiran.com : ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ೬ ಸಾವಿರ ಲೀಟರ್ ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆಯ ಘಟಕಕ್ಕೆ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಇದುವರೆಗೆ ಪ್ರತಿದಿನ ೮೦ ರಿಂದ ೧೦೦ ಜಂಬೋ ಆಕ್ಸಿಜನ್ ಸಿಲಿಂಡರುಗಳನ್ನು ವೈದ್ಯಕೀಯ ಚಿಕಿತ್ಸೆಗೆ ಬಳಸಲಾಗುತ್ತಿತ್ತು. ಇವುಗಳನ್ನು ಪ್ರತಿದಿನ ಪೂರೈಕೆದಾರರ ಬಳಿ ತೆಗೆದುಕೊಂಡು ಹೋಗಿ ತುಂಬಿಸಿಕೊAಡು ಬರಬೇಕಾಗಿತ್ತು. ಈಗ ೬ ಸಾವಿರ ಲೀಟರ್ ಸಾಮರ್ಥ್ಯದ ಕೇಂದ್ರೀಕೃತ ಆಕ್ಸಿಜನ್ ಪೂರೈಕೆ ಘಟಕ ಸ್ಥಾಪನೆಯಿಂದ […]

ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೧೨೫, ೩ ತಾಲೂಕು ಆಸ್ಪತ್ರೆಗಳಲ್ಲಿ ತಲಾ ೫೦ ಹಾಸಿಗೆ 

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡಲು ಸಿದ್ಧತೆಗಳನ್ನು ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೧೨೫ ಹಾಗೂ ಕುಂದಗೋಳ, ಕಲಘಟಗಿ ಹಾಗೂ ನವಲಗುಂದ ತಾಲೂಕು ಆಸ್ಪತ್ರೆಗಳಲ್ಲಿ ತಲಾ ೫೦ ಸೇರಿ ಒಟ್ಟು ೨೭೫ ಹಾಸಿಗೆಗಳಿಗೆ ಆಮ್ಲಜನಕ ಪೂರೈಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕೊರೊನಾ ಚಿಕಿತ್ಸೆಗೆ ಯಾವುದೇ ವ್ಯತ್ಯಯವಾಗದಂತೆ ಎಲ್ಲ ಮುಂಜಾಗೃತಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ೧೨೫ ಹಾಸಿಗೆಗಳಿಗೆ ಆಮ್ಲಜನಕ ಪೂರೈಸುವ ಕಾಮಗಾರಿ ಬಹುತೇಕ ಪೂರ್ಣವಾಗಿದೆ.  ಜುಲೈ […]

ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯ ಸ್ಟಾಪ್ ನರ್ಸ್ ಸೇರಿ ನಾಲ್ವರು ಕರೋನಾ ಸೇನಾನಿಗಳು ಗುಣಮುಖ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಾದ್ಯಂತ ಕರೋನಾ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗುತ್ತಿರುವ ಬೆನ್ನಹಿಂದೆಯೇ ಗುಣಮುಖರಾಗುವವರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಕರೋನಾ ಸೋಂಕಿನ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿ ಬಳಲಿ ಬೆಂಡಾಗಿ ಆಸ್ಪತ್ರೆಗೆ ಸೇರಿ ಇದೀಗ ಅದರಿಂದ ಗುಣಮುಖರಾಗಿ ಬಿಡುಗಡೆಗೊಂಡಿರುವುದು ಕರೋನಾ ಸೇನಾನಿಗಳ ಹಾಗೂ ಅವರ ಕುಟುಂಬದ ಸದಸ್ಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಧಾರವಾಡದ ಸಂಚಾರ ಪೊಲೀಸ್ ಠಾಣೆ ಹೆಡ್ ಕಾನ್ಸಟೇಬಲ್ ಒಬ್ಬರು ಗುಣಮುಖರಾಗಿ ಮನೆಗೆ ಮರಳಿದ ಬೆನ್ನಲ್ಲೇ  […]

ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸದಿರಲು ಆಗ್ರಹ

ಧಾರವಾಡ prajakiran.com : ಧಾರವಾಡ ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಬಾರದು ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ಪಿ.ಎಚ್. ನೀರಲಕೇರಿ ಆಗ್ರಹಿಸಿದರು. ಅವರು ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಇದು ಜನನೀಬಿಡ ಮಾರುಕಟ್ಟೆ ಸಮೀಪದ ಸ್ಥಳದಲ್ಲಿದ್ದು, ನೂರು ಮೀಟರ್ ಅಂತರದೊಳಗೆ ಸಾಕಷ್ಟು ಮನೆಗಳಿವೆ. ಇದರಿಂದ ಸ್ಥಳೀಯರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಧಾರವಾಡ ಜಿಲ್ಲಾಡಳಿತ ಕರೋನಾ ನಿಯಂತ್ರಣ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಜಿಲ್ಲಾಉಸ್ತುವಾರಿ ಸಚಿವರು, ಜಿಲ್ಲಾಡಳಿತ ಲಾಕ್ ಡೌನ್ ಸಂದರ್ಭದಲ್ಲಿ ಪ್ರತ್ಯೇಕ ಆಸ್ಪತ್ರೆ ನಿರ್ಮಾಣ […]

ರಾಜ್ಯ

ಧಾರವಾಡ ಜಿಲ್ಲಾಸ್ಪತ್ರೆಯ ಸ್ಟಾಪ್ ನರ್ಸ್ ಗೂ ಕರೋನಾ …!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಾದ್ಯಂತ ಕರೋನಾ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ಕರೋನಾ ಸೇನಾನಿಗಳಾಗಿ ಅದರ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ  ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಯನ್ನುಂತೂ ಬೆಂಬಿಡದೆ ಕಾಡುತ್ತಿದೆ. ಈಗಾಗಲೇ ಧಾರವಾಡದ ಸಂಚಾರ ಪೊಲೀಸ್ ಠಾಣೆ, ಶಹರ ಪೊಲೀಸ್ ಠಾಣೆ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ವೈದ್ಯ ಹಾಗೂ ಮೂವರು ಸ್ಟಾಪ್ ನರ್ಸ್ ಗಳಿಗೆ ಕರೋನಾ ಹರಡಿದೆ. ಅದರ ಬೆನ್ನಲ್ಲೇ ಇದೀಗ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ಟಾಪ್ ನರ್ಸ್ ಗೂ ಕರೋನಾ […]