ರಾಜ್ಯ

ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ನಿರ್ದೇಶಕರಾಗಿ ಮಮತಾ ನಾಯಕ ಅಧಿಕಾರ ಸ್ವೀಕಾರ

ಧಾರವಾಡ prajakiran.com : ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕಶೈಕ್ಷಣಿಕ ವಲಯದ ಆಯುಕ್ತರ ಕಚೇರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನೂತನ ನಿರ್ದೇಶಕರಾಗಿ ಕೆ.ಇ.ಎಸ್. ಹಿರಿಯ ಶ್ರೇಣಿ ಅಧಿಕಾರಿ ಮಮತಾ  ನಾಯಕ  ಶನಿವಾರ ಅಧಿಕಾರ ಸ್ವೀಕರಿಸಿದರು. ೧೯೯೪ರಲ್ಲಿ ಕೆ.ಇ.ಎಸ್. ತೇರ್ಗಡೆಯಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಅಲಗೇರಿ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕರಾಗಿ ಸರಕಾರಿ ಸೇವೆ ಆರಂಭಿಸಿದರು.  ನಗರದ ಡಯಟ್ ಉಪನ್ಯಾಸಕರಾಗಿ ಸೇವೆಸಲ್ಲಿಸಿ, ಬಿಇಓ ಹುದ್ದೆಗೆ ಪದೋನ್ನತಿ ಹೊಂದಿ ಕಾರವಾರ ತಾಲೂಕಿನ ಬಿಇಓ ಆಗಿ ಸೇವೆ ಸಲ್ಲಿಸಿದರು.  ನಗರದ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿ, ಧಾರವಾಡ ಡಯಟ್ ಉಪಪ್ರಾಚಾರ್ಯರಾಗಿ ಸೇವೆಗೈದಿದ್ದಾರೆ. ಡಿಡಿಪಿಐ ಹುದ್ದೆಗೆ ಪದೋನ್ನತಿ ಪಡೆದು, ಬೆಳಗಾವಿಯ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ(ಸಿಟಿಇ)ದ ಸಮಾನಾಂತರ ಹುದ್ದೆಯಲ್ಲಿ ರೀಡರ್ ಆದರು. ನಗರದ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ಮತ್ತು ಹಾವೇರಿ ಜಿಲ್ಲೆಯ ಆಡಳಿತ ಉಪನಿರ್ದೇಶಕರಾಗಿ ಸೇವೆಸಲ್ಲಿಸಿದ್ದಾರೆ. ಜಂಟಿ ನಿರ್ದೇಶಕರ ಹುದ್ದೆಗೆ ಪದೋನ್ನತಿ ಹೊಂದಿ ಬೆಳಗಾವಿಯ ಸಿಟಿಇ ಪ್ರಾಚಾರ್ಯರಾಗಿ ಮತ್ತು ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.  […]

ರಾಜ್ಯ

ಶಿಕ್ಷಕರು ವಾರದಲ್ಲಿ ಕನಿಷ್ಠ ಒಂದು ಬಾರಿಯಾದರೂ ವಿದ್ಯಾರ್ಥಿಗಳನ್ನು ಸಂಪರ್ಕಿಸಿ

ಧಾರವಾಡ prajakiran.com : ವಾರದಲ್ಲಿ ಕನಿಷ್ಠ ಒಂದು ಬಾರಿಯಾದರೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮಾರ್ಗದರ್ಶನ ನೀಡಬೇಕು ಎಂದು ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ನಿರ್ದೇಶಕಿ ಮಮತಾ ನಾಯಕ ಹೇಳಿದರು.  ಅವರು ಮಂಗಳವಾರ ನಗರದ ಡಯಟ್‌ನ ಡೆಪ್ಯೂಟಿ ಚೆನ್ನಬಸಪ್ಪ ಸಮಾವೇಶ ಭವನದಲ್ಲಿ ಜಿಲ್ಲಾ ಮಟ್ಟದ ವಿದ್ಯಾಗಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ವಿದ್ಯಾಗಮ ಯೋಜನೆಯು ಬೇರೆ ರಾಜ್ಯಗಳಲ್ಲಿಯೂ ಇದೀಗ ಅನುಷ್ಠಾನವಾಗುತ್ತಿರುವುದು ಬಹಳ ಹೆಮ್ಮೆಯ ವಿಷಯ ಎಂದರು. ಪ್ರತೀ ವಾರ […]

ಜಿಲ್ಲೆ

ಧಾರವಾಡ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾಗಮ ಅನುಷ್ಠಾನ ವೀಕ್ಷಣೆ   

 ಧಾರವಾಡ prajakiran.com : ಧಾರವಾಡ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕಿ ಮಮತಾ ನಾಯಕ ಸೋಮವಾರ ವೀಕ್ಷಣೆ ಮಾಡಿದರು.  ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಜಿಲ್ಲೆಯ ವಿದ್ಯಾಗಮ ಕಾರ್ಯಕ್ರಮದ ಅನುಷ್ಠಾನದ ಕುರಿತು ಸಮಗ್ರ ಮಾಹಿತಿಯನ್ನು ಪಡೆದು ಮಾರ್ಗದರ್ಶನ ಮಾಡಿದರು. ನಂತರ ಧಾರವಾಡ ಗ್ರಾಮೀಣ ವಲಯದ ಕೆಜಿಎಸ್ ನರೇಂದ್ರ ಹಾಗೂ ಜಿಹೆಚ್‌ಎಸ್ ಚಿಕ್ಕಮಲ್ಲಿಗವಾಡ ಶಾಲೆಗಳ ವೀಕ್ಷಣೆ ಮಾಡಿದರು. ಗ್ರಾಮೀಣ ಮಕ್ಕಳು ಬಹಳ ಉತ್ಸಾಹದಿಂದ ಕಲಿಕಾ ಕೇಂದ್ರಗಳಲ್ಲಿ ಭಾಗವಹಿಸಿರುವುದು ಹಾಗೂ ಊರಿನ ಜನರ […]