ಅಂತಾರಾಷ್ಟ್ರೀಯ

ಭಯೋತ್ಪಾದಕರ ದಾಳಿ : ಇಬ್ಬರು ಪೊಲೀಸರು ಸೇರಿ ನಾಲ್ವರ ಸಾವು

ಜಮ್ಮು ಮತ್ತು ಕಾಶ್ಮೀರ Prajakiran.com : ಇಲ್ಲಿನ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ಶನಿವಾರ ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯಲ್ಲಿ ಇಬ್ಬರು ಪೊಲೀಸರು ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಇತರ ಮೂವರು ಪೊಲೀಸರು ಸೇರಿದಂತೆ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ. ಉತ್ತರ ಕಾಶ್ಮೀರದ ಸೊಪೋರ್‌ನ ಅರಂಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ಹಾಗೂ […]