ರಾಜ್ಯ

ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ, ನಿಪ್ಪಾಣಿ ಲಾಕ್‌ಡೌನ್

ಬೆಳಗಾವಿ prajakiran.com : ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ದಿನಾಂಕ:14.07.2020ರ ರಾತ್ರಿ 8.00 ಗಂಟೆಯಿಂದ 22.07.2020ರ ಬೆಳಿಗ್ಗೆ 5.00 ಗಂಟೆಯವರೆಗೆ 7 ದಿನಗಳ ಅವಧಿಯವರೆಗೆ ಲಾಕ್‌ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಘೋಷಿಸಿದ್ದಾರೆ.  ಈ ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದ 2 ವಾರಗಳಂದೀಚೆಗೆ ಕೋವಿಡ್-19 ಸೋಂಕು ಹರಡುವಿಕೆಯ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಮರಣ ಪ್ರಮಾಣವು ಕೂಡಾ ಹೆಚ್ಚಳವಾಗಿರುತ್ತದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಜ್ಞರೊಂದಿಗೆ ಈ ವಿಷಯದ ಕುರಿತು […]

ರಾಜ್ಯ

ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಎಂದ ಲಕ್ಷ್ಮಿ ಹೆಬ್ಬಾಳಕರ್  

ಬೆಳಗಾವಿ prajakiran.com : ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ಈ ಕುರಿತು ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗಾವಿ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಮಾತನಾಡುತ್ತ, ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ ಎಂದು ಹೇಳಿಕೆ ನೀಡಿದ್ದರು. ಜೊತೆಗೆ, ಬರಲಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ದುಡ್ಡು ಹಂಚುವುದಾಗಿ ಹೇಳಿಕೆ ನೀಡಿದ್ದರು. […]

ರಾಜ್ಯ

ಲಕ್ಷ್ಮೀ‌ ಹೆಬ್ಬಾಳ್ಕರ್ ಗೆ ಕುಕ್ಕರ್ ಕೊಡಿಸಿದ್ದು ನಾನೇ ಎಂದ ರಮೇಶ ಜಾರಕಿಹೊಳಿ….!

ಬೆಳಗಾವಿ prajakiran.com : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ‌ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಗ್ರಾಮೀಣ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾಡಿದ ಸಚಿವ ರಮೇಶ ಜಾರಕಿಹೊಳಿ ಮತ್ತೆ ಶಾಸಕಿ ಲಕ್ಷ್ಮಿ‌ ಹೆಬ್ಬಾಳಕರ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಕಚೇರಿ ಉದ್ಘಾಟಿಸಿ  ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌ ಭಾಷಣದ ಉದ್ದಕ್ಕೂ ಲಕ್ಷ್ಮಿ ಹೆಬ್ಬಾಳಕರ ವಿರುದ್ದ  ಹರಿಹಾಯದ್ರು.  ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಣದ ಗಮಂಡ್ ಬಹಳ ಇದೆ. ಆ ಹಣದ ಗಮಂಡ್‌ನ್ನು‌ ನಾವು ತೋರಿಸಲು ನಾನು ರೆಡಿ ಇದ್ದೇನೆ ಎಂದು ಗುಡುಗಿದರು. ಕಳೆದ ಚುನಾವಣೆಯಲ್ಲಿ […]

ರಾಜ್ಯ

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ದ ಮತ್ತೆ ಹರಿಹಾಯ್ದಸಚಿವ ರಮೇಶ ಜಾರಕಿಹೊಳಿ

 ಬೆಳಗಾವಿ prajakiran.com  : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ದ ಗುರುವಾರ ಮತ್ತೆ ಜಲ ಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹರಿಹಾಯ್ದಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಗ್ಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರಗೆ ಸಚಿವ ರಮೇಶ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ. ಅಲ್ಲದೆ, ಲಕ್ಷ್ಮೀ ಹೆಬ್ಬಾಳಕರಗೆ ಮತ್ತೆ ಮಾತಿನ ಚಾಟಿಯೇಟು ಬಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರು ಹರಿಹಾಯ್ದಿದ್ದು, ಮೊನ್ನೆ ನಡೆದ ಸಭೆಯಲ್ಲಿ […]

ರಾಜ್ಯ

ಜಾನುವಾರುಗಳೊಂದಿಗೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಪ್ರವಾಹ ಸಂತ್ರಸ್ತರು

ಬೆಳಗಾವಿ prajakiran.com : ಜಾನುವಾರುಗಳೊಂದಿಗೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರವಾಹ ಸಂತ್ರಸ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ತಹಶೀಲ್ದಾರ ಕಚೇರಿ ಮುಂದೆ ಈ ಪ್ರತಿಭಟನೆ ನಡೆಸಿ ಸಂತ್ರಸ್ತರು ತಮ್ಮ ಅಸಮಾಧಾನ ಹೊರ ಹಾಕಿದರು. ಪ್ರವಾಹಕ್ಕೆ ಒಳಗಾದ ಸಂತ್ರಸ್ತರಿಗಾಗಿ ರೈತ ಸಂಘಟನೆಯಿಂದ ಈ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರವಾಹ ಸಮಯದಲ್ಲಿ ಯಾವುದೇ ರೀತಿಯ ಪರಿಶೀಲನೆ ನಡೆಸದ ಕಾರಣಕ್ಕೆ ರೈತ ಸಂಘಟನೆ  ಹಾಗೂ ಸಂತ್ರಸ್ತ್ರರು ಪ್ರತಿಭಟನೆ […]

ರಾಜ್ಯ

ಗೋಕಾಕ ಲೋಕೋಪಯೋಗಿ ಕಚೇರಿ‌ ಸೀಲ್ ಡೌನ್ : 14 ಸಿಬ್ಬಂದಿಗಳಿಗೆ ಹೋಮ್ ಕ್ವಾರಂಟೈನ್

ಬೆಳಗಾವಿ prajakiran.com  :  ಕರೋನಾ ಸೋಂಕಿತನ ಸಂಪರ್ಕಕ್ಕೆ ಬಂದವನಿಂದ ಸರ್ಕಾರಿ ಕಚೇರಿಯೂ ಸೀಲ್ ಡೌನ್ ಆದ ಘಟನೆ ಕುಂದಾನಗರಿ ಬೆಳಗಾವಿಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿರುವ ಪಿಡಬ್ಲ್ಯೂಡಿ ಕಚೇರಿಯೇ ಸೀಲ್ ಡೌನ್ ಮಾಡಲಾಗಿದ್ದು, ಸೋಂಕಿತನ ಸಂಪರ್ಕಕ್ಕೆ ಹೋಗಿ ಬಂದವನಿಂದಾಗಿ ಸರ್ಕಾರಿ ಕಚೇರಿ ಸೀಲ್ ಡೌನ್ ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾಡಳಿತ ತಿಳಿಸಿದೆ. ಲೋಕೊಪಯೋಗಿ ಕಚೇರಿಯಲ್ಲಿ ದ್ವಿತಿಯ ದರ್ಜೆ ಕೆಲಸಗಾರನಾಗಿರುವ ಕೆಲಸಗಾರನಿಂದ ಈಗ ಟೆನ್ಷನ್ ಆಗಿದೆ. ಸೋಂಕಿತನಿದ್ದ ಕಲ್ಲೋಳಿ ಗ್ರಾಮದ ಮನೆಗೆ ಭೇಟಿ ನೀಡಿ […]