ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ 176 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 1574 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿ ಗುರುವಾರ ಯಾರೊಬ್ಬರು ಸಾವನ್ನಪ್ಪದಿರುವುದು ಸ್ವಲ್ಪ ಸಮಾಧಾನದ ಸಂಗತಿಯಾಗಿದೆ. ಗುರುವಾರ 42 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 524 ಜನ ಬಿಡುಗಡೆಯಾಗಿದ್ದಾರೆ. ಇನ್ನೂ 1006 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ […]