ರಾಜ್ಯ

ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ನಿರ್ದೇಶಕರಾಗಿ ಮಮತಾ ನಾಯಕ ಅಧಿಕಾರ ಸ್ವೀಕಾರ

ಧಾರವಾಡ prajakiran.com : ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕಶೈಕ್ಷಣಿಕ ವಲಯದ ಆಯುಕ್ತರ ಕಚೇರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನೂತನ ನಿರ್ದೇಶಕರಾಗಿ ಕೆ.ಇ.ಎಸ್. ಹಿರಿಯ ಶ್ರೇಣಿ ಅಧಿಕಾರಿ ಮಮತಾ  ನಾಯಕ  ಶನಿವಾರ ಅಧಿಕಾರ ಸ್ವೀಕರಿಸಿದರು. ೧೯೯೪ರಲ್ಲಿ ಕೆ.ಇ.ಎಸ್. ತೇರ್ಗಡೆಯಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಅಲಗೇರಿ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕರಾಗಿ ಸರಕಾರಿ ಸೇವೆ ಆರಂಭಿಸಿದರು.  ನಗರದ ಡಯಟ್ ಉಪನ್ಯಾಸಕರಾಗಿ ಸೇವೆಸಲ್ಲಿಸಿ, ಬಿಇಓ ಹುದ್ದೆಗೆ ಪದೋನ್ನತಿ ಹೊಂದಿ ಕಾರವಾರ ತಾಲೂಕಿನ ಬಿಇಓ ಆಗಿ ಸೇವೆ ಸಲ್ಲಿಸಿದರು.  ನಗರದ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿ, ಧಾರವಾಡ ಡಯಟ್ ಉಪಪ್ರಾಚಾರ್ಯರಾಗಿ ಸೇವೆಗೈದಿದ್ದಾರೆ. ಡಿಡಿಪಿಐ ಹುದ್ದೆಗೆ ಪದೋನ್ನತಿ ಪಡೆದು, ಬೆಳಗಾವಿಯ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ(ಸಿಟಿಇ)ದ ಸಮಾನಾಂತರ ಹುದ್ದೆಯಲ್ಲಿ ರೀಡರ್ ಆದರು. ನಗರದ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ಮತ್ತು ಹಾವೇರಿ ಜಿಲ್ಲೆಯ ಆಡಳಿತ ಉಪನಿರ್ದೇಶಕರಾಗಿ ಸೇವೆಸಲ್ಲಿಸಿದ್ದಾರೆ. ಜಂಟಿ ನಿರ್ದೇಶಕರ ಹುದ್ದೆಗೆ ಪದೋನ್ನತಿ ಹೊಂದಿ ಬೆಳಗಾವಿಯ ಸಿಟಿಇ ಪ್ರಾಚಾರ್ಯರಾಗಿ ಮತ್ತು ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.  […]

ರಾಜ್ಯ

ಪಾರ್ಶ್ವವಾಯು ಪೀಡಿತ ಶಿಕ್ಷಣಾಧಿಕಾರಿಗೆ ಸ್ವಯಂ ನಿವೃತ್ತಿ ಆದೇಶ ಹಸ್ತಾಂತರ

ಶೀಘ್ರ  ನಿವೃತ್ತಿಯ ಎಲ್ಲಾ ಸೌಲಭ್ಯಗಳು ಅನುಕಂಪ ಆಧಾರಿತ ನೌಕರಿ ಸಚಿವ ಸಂಪುಟಸಭೆಯಲ್ಲಿ ನಿರ್ಧಾರ ಮಹದೇವ ಮಾಳಗಿ ನಿವಾಸಕ್ಕೆ ಸಚಿವ ಎಸ್.ಸುರೇಶಕುಮಾರ್ ಭೇಟಿ, ಧಾರವಾಡ prajakiran.com : ಕಳೆದ ಐದು ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ ಶೇ.100 ರಷ್ಟು ಅಂಗವೈಕಲ್ಯದಿಂದ  ಹಾಸಿಗೆ ಹಿಡಿದಿರುವ ಕೆಇಎಸ್ ಅಧಿಕಾರಿ, ಬೆಳಗಾವಿ ಡಯಟ್ ಹಿರಿಯ ಉಪನ್ಯಾಸಕ ಮಹದೇವ ಬ.ಮಾಳಗಿ ಅವರ ನಿವಾಸಕ್ಕೆ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಗುರುವಾರ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ, ಇದೇ ವೇಳೆ ಅಧಿಕಾರಿಯ ಸ್ವಯಂ ನಿವೃತ್ತಿ ಆದೇಶವನ್ನು […]

ರಾಜ್ಯ

ಧಾರವಾಡದ ಕೆ ಇ ಎಸ್ ಅಧಿಕಾರಿಗೆ ಕೊನೆಗೂ ಸ್ವಯಂ ನಿವೃತ್ತಿಗೆ ಸಮ್ಮತಿ

ಮಹದೇವ ಮಾಳಗಿ ಕುಟುಂಬದ ದಯನೀಯ ಸ್ಥಿತಿಗೆ ಮರುಗಿದ ಶಿಕ್ಷಣ ಸಚಿವರು ಧಾರವಾಡ prajakiran.com : ಧಾರವಾಡದ ಕೆ ಇ ಎಸ್ ಅಧಿಕಾರಿ ಮಹಾದೇವ ಮಾಳಗಿ ಅವರಿಗೆ ಕೊನೆಗೂ ಸ್ವಯಂ ನಿವೃತ್ತಿ ಹೊಂದಲು ರಾಜ್ಯ ಸರಕಾರ ಸಮ್ಮತಿ ಸೂಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಂಪೂರ್ಣಅಸಹಾಯಕ ಸ್ಥಿತಿಯಲ್ಲಿದ್ದು, ಹಾಸಿಗೆ ಹಿಡಿದು ಆರು ವರ್ಷಗಳೇ ಕಳೆದರೂ ಮಾಳಗಿ ಅವರ ನೆರವಿಗೆ ಆಳುವ ಸರಕಾರಗಳು ಬಂದಿರಲಿಲ್ಲ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿತ್ತು.  ಕೊನೆಗೂ ಶಿಕ್ಷಣ ಸಚಿವರ ಸೂಚನೆ ಮೇರೆಗೆ […]