ರಾಜ್ಯ

ಧಾರವಾಡದ ಕಟ್ಟಡ ಕುಸಿತ ಪ್ರಕರಣ : ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೌನ

ಧಾರವಾಡ prajakiran.com : ಕುಮಾರೇಶ್ವರ ನಗರ ಕಟ್ಟಡದ ಕುಸಿತ ಪ್ರಕರಣದಲ್ಲಿ ಕೈ ಕಾಲು ಕಳೆದುಕೊಂಡ ಅನೇಕರಿಗೆ ಈವರೆಗೆ ರಾಜ್ಯ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಿಲ್ಲ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಹೆಚ್. ಕೊರವರ ಆರೋಪಿಸಿದರು. ಅವರು ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಟ್ಟಡ ಕುಸಿತದಲ್ಲಿ ಒಟ್ಟು 19 ಜನರು ಸಾವನ್ನಪ್ಪಿದ್ದು, 57 ಜನರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇದರಲ್ಲಿ 15 ಜನರಿಗೆ ಮಾತ್ರವೇ 7 ಲಕ್ಷ ಪರಿಹಾರ ಕೇಂದ್ರ, ರಾಜ್ಯ ಹಾಗೂ ಮಹಾನಗರ ಪಾಲಿಕೆ […]

ರಾಜ್ಯ

ವಿದ್ಯಾಗಮ ಮಕ್ಕಳಿಂದ ಪ್ರಾರ್ಥನೆ ಹೇಳಿಸಿ, ಪಾಠ ಮಾಡಿದ ಶಿಕ್ಷಣ ಸಚಿವರು

ಧಾರವಾಡ prajakiran.com : ವಿದ್ಯಾಗಮ ಕಾರ್ಯಕ್ರಮದ ಪರಿಶೀಲನೆಗಾಗಿ  ಧಾರವಾಡ ಗ್ರಾಮೀಣ ವಿಭಾಗದ ಸಲಕಿನಕೊಪ್ಪ ಹಾಗೂ ಬಾಡ ಗ್ರಾಮಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅವರು ಮಕ್ಕಳಿಂದ ನಾಡಗೀತೆ ಹಾಡಿಸಿ ಪಾಠ, ಮಗ್ಗಿ ಹೇಳಿಸಿ ಮಕ್ಕಳ ಶಿಕ್ಷಣಮಟ್ಟ ಪರೀಕ್ಷಿಸಿದರು. ಸಲಕಿನಕೊಪ್ಪ ಗ್ರಾಮದಲ್ಲಿ ವಿದ್ಯಾಗಮ ಪಾಠದಲ್ಲಿ ನಿರತರಾಗಿರುವ ಮಕ್ಕಳಿಗೆ ಭಾರತದ ಮೊದಲ ರಾಷ್ಟ್ರಪತಿ ಯಾರು, ಮಗ್ಗಿಯನ್ನು ಕ್ರಮವಾಗಿ ಹಾಗೂ ವಿರುದ್ಧವಾಗಿ ಹೇಳಿಸಿದರು. ಮಕ್ಕಳ ಕೈಬರಹ ಕಂಡು ಸಂತಸಪಟ್ಟರು. ಕೊರೊನಾ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ಮಕ್ಕಳಿಂದ ವಿವರಿಸಲು ಹೇಳಿದರು. […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರಗೆ ಗೃಹ ಸಚಿವ ಬೊಮ್ಮಾಯಿ ಕ್ಲಾಸ್

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗರಂ ಹುಬ್ಬಳ್ಳಿ prajakiran.com : ಹುಬ್ಬಳ್ಳಿ- ಧಾರವಾಡದಲ್ಲಿ ಸರಣಿ ಕೊಲೆಗಳ ವಿಚಾರ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಅವರನ್ನು ಹುಬ್ಬಳ್ಳಿಯ ತಮ್ಮ ಮನೆಗೆ ಕರೆಸಿಕೊಂಡು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ವಿರುದ್ಧ ಸಚಿವರು ತಮ್ಮಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಏನೇ ನಡೆದ್ರು ನೀವೇ ಹೊಣೆ ಎಂದು […]

ಅಂತಾರಾಷ್ಟ್ರೀಯ

ಸಂತೋಷಜಿ ಭೇಟಿ ಮಾಡಿದ ಇಬ್ಬರು ಸಚಿವರು…!

ಬೆಂಗಳೂರು prajakiran.com : ಬಿಜೆಪಿ ಹೈಕಮಾಂಡ್ ನಾಯಕರಲ್ಲಿ ಒಬ್ಬರಾಗಿರುವ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಶುಕ್ರವಾರ ರಾಜ್ಯದ ಇಬ್ಬರು ಸಚಿವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅದರಲ್ಲೂ ಎರಡು ಪ್ರಮುಖ ವಿಚಾರಗಳ ಕುರಿತು ಇಬ್ಬರು ಸಚಿವರಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಬಳಿ ಬೆಂಗಳೂರು ಡಿ.ಜೆ. ಹಳ್ಳಿ ಗಲಾಟೆ ಕುರಿತು ಸಂಪೂರ್ಣ ವರದಿ ಪಡೆದಿದ್ದಾರೆ. ಅಲ್ಲದೆ, ಮುಂದೆ ಕೈ ಗೊಳ್ಳಬೇಕಾದ ಕ್ರಮಗಳು ಕುರಿತು ಸಮಾಲೋಚನೆ ನಡೆಸಿದ್ದಾರೆ ಎಂದು […]

ರಾಜ್ಯ

ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದ ಬಾಲಕ ಸಾಧನೆ

ಬೆಂಗಳೂರು prajakiran.com : ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿಗೆ ಗುಳೆ ಬಂದ ಬಾಲಕನೊಬ್ಬ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾನೆ. ಬೆಂಗಳೂರಿನ ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಕರ್ನಾಟಕ ಸರ್ಕಾರದ ಕರ್ನಾಟಕ ಪಬ್ಲಿಕ್ ಶಾಲೆಯ (KPS) ವಿದ್ಯಾರ್ಥಿ  ಮಹೇಶ ಎಸ್ಎಸ್ಎಲ್ ಸಿ  ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕಗಳನ್ನು ಪಡೆದು ಎಲ್ಲರಿಂದ ಭೇಶ್ ಎನಿಸಿಕೊಂಡಿದ್ದಾನೆ.  ಅವರ ತಾಯಿ ಮಲ್ಲವ್ವ  ಅವರಿವರ ಮನೆ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದಾರೆ. ಮಹೇಶ ಸಹ ಕಟ್ಟಡ ನಿರ್ಮಾಣ ಕಾರ್ಯದಲ್ಲಿ […]

ರಾಜ್ಯ

ಗಂಜಿಗಟ್ಟಿ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರಧನ

ಧಾರವಾಡ prajakiran.com : ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆ ನೀರಿನ ಸೇಳವಿನಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತಪಟ್ಟ ಹಿನ್ನಲೆಯಲ್ಲಿ ಶನಿವಾರ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಭೇಟಿ ನೀಡಿ ಕುಟುಂಬಸ್ಥರಿಗೆ ಸರಕಾರದ 5 ಲಕ್ಷ ರೂ. ಪರಿಹಾರಧನದ ಚೆಕ್ ನೀಡಿ, ಸಾಂತ್ವನ ಹೇಳಿದರು. ಶಾಸಕ ಸಿ.ಎಂ ನಿಂಬ್ಬಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಗಂಜಿಗಟ್ಟಿ ಕಲಘಟಗಿ ಮದ್ಯದ ಲೋಕೊಪಯೋಗಿ ರಸ್ತೆಯ ದುರಸ್ಥಿಕರಣಕ್ಕೆ ಕ್ರಮ ಕೈಗೊಳ್ಳುವುದಾಗಿ […]

minister shetter
ರಾಜ್ಯ

ಧಾರವಾಡ ಜಿಲ್ಲೆಯ ೨೧೫೨ ಜನ ಗುಣಮುಖ

ಒಟ್ಟು ೪,೬೪೪ ಜನರಲ್ಲಿ ಸೋಂಕು ಕೊರೊನಾ ಸೋಂಕಿತರ ಉತ್ತಮ ಚಿಕಿತ್ಸೆ : ಗುಣಮುಖವಾದವರ ಸಂಖ್ಯೆ ಹೆಚ್ಚಳ ಧಾರವಾಡ prajakiran.com : ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸುಮಾರು ೪೦,೩೯೩ ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದುವರೆಗೆ ಒಟ್ಟು ೪,೬೪೪ ಜನರಲ್ಲಿ ಸೋಂಕು ಪತ್ತೆಯಾಗಿದೆ. ೨೩೩೭ ಜನರಿಗೆ ಚಿಕಿತ್ಸೆ ನಡೆಯುತ್ತಿದ್ದು, ಸುಮಾರು ೨೧೫೨ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಸಿಗುತ್ತಿದೆ. ಹೋಮ್ ಐಸೊಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಲಹೆ ಸೂಚನೆ ನೀಡುವ ಕೆಲಸ ಇನ್ನಷ್ಟು […]