ರಾಜ್ಯ

ಧಾರವಾಡದಲ್ಲಿ ಕರೊನಾ ಟೆಸ್ಟ್ ಗೆ ಹೆದರಿ ಅಂಗಡಿ ಬಂದ್ ಮಾಡಿದ ವ್ಯಾಪಾರಸ್ಥರು…!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕರೊನಾ ಟೆಸ್ಟ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗುರುವಾರ ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಹಾಗೂ ಧಾರವಾಡದ ಸುಭಾಸ ರಸ್ತೆಯಲ್ಲಿ ನೂರಾರು ವ್ಯಾಪಾರಸ್ಥರನ್ನು ಕರೊನಾ ಟೆಸ್ಟ್ ಗೆ ಒಳಪಡಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮುಂದೆ ನಿಂತು ವ್ಯಾಪಾರಿಗಳನ್ನು ಕರೆಸಿ ಸಂಚಾರ ವಾಹನದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕರೊನಾ ಟೆಸ್ಟ್ ಮಾಡಿಸಿದ್ದಾರೆ. ಇದರಿಂದಾಗಿ ದುರ್ಗದ ಬೈಲ್‌ನಲ್ಲಿ 100ಕ್ಕೂ ಹೆಚ್ಚು ವ್ಯಾಪಾರಿಗಳ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 3.5 ಸಾವಿರ ಗಡಿ ದಾಟಿದ ಕರೋನಾ : ಇದುವರೆಗೆ 1453 ಗುಣಮುಖ….!

ಧಾರವಾಡ prajakiran.com  :  ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿರುವ ಕರೋನಾ ಸೋಂಕು ಪ್ರತಿ ದಿನ 200 ರ ಗಡಿ ಸಮೀಪಿಸುತ್ತಲೇ ಇರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಶ್ರಾವಣ ಮಾಸದ ಆರಂಭದಲ್ಲಿಯೇ ಇಂತಹ ಸಂಕಷ್ಟ, ಸವಾಲು ಎದುರಾಗಿರುವುದು ಜಿಲ್ಲೆಯ ಜನತೆಗೆ ಇದು ಬಿಗ್ ಶಾಕ್ ನೀಡಿದ್ದು, ಜನತೆ ಕಂಗಾಲಾಗಿ ಹೋಗಿದ್ದಾರೆ.   ಇದಲ್ಲದೆ, ಧಾರವಾಡ ಜಿಲ್ಲಾಡಳಿತ ಎಷ್ಟೇ ಪ್ರಯತ್ನ ಪಟ್ಟು ಇದಕ್ಕೆ ಕಡಿವಾಣ ಹಾಕಲು ಹತ್ತು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ […]

ರಾಜ್ಯ

ಧಾರವಾಡ ಜಿಲ್ಲೆಯಾದ್ಯಂತ ರಾತ್ರಿ ೯ ಗಂಟೆಯಿಂದ ಬೆಳಗ್ಗೆ ೫ ಗಂಟೆಯವರೆಗೆ ಕರ್ಫ್ಯೂ

ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ವಿಪತ್ತು ನಿರ್ವಹಣೆ ಕಾಯ್ದೆ, ೨೦೦೫ ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ  ಅನ್‌ಲಾಕ್-೨ ರ ಮಾರ್ಗಸೂಚಿಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡಿ ಲಾಕ್‌ಡೌನ್‌ನ ಮಾರ್ಗಸೂಚಿಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಿಸಿದ್ದಾರೆ.  ಈ ಮಾರ್ಗಸೂಚಿಗಳು ಜುಲೈ ೨೨ ರ ಬೆಳಿಗ್ಗೆ ೫ ಗಂಟೆಯಿಂದ ಜುಲೈ ೩೧ರ ವರೆಗೆ ಜಾರಿಯಲ್ಲಿರುತ್ತವೆ. ಕೋವಿಡ್ ಹರಡುವಿಕೆಯನ್ನ ನಿಯಂತ್ರಿಸಲು, ಸೊಂಕು ಪತ್ತೆ ಹಚ್ಚುವಿಕೆ, ಪರೀಕ್ಷೆ, ಟ್ರ್ಯಾಕಿಂಗ್, ತಾಂತ್ರಿಕತೆ ಉಪಯೋಗಿಸಿ ಚಿಕಿತ್ಸೆ ನೀಡುವುದು […]

ರಾಜ್ಯ

ಮದುವೆಗೆ ೫೦ ಕ್ಕೂ ಹೆಚ್ಚು ಜನ ಸೇರಿದರೆ ಕಾನೂನು ಕ್ರಮದ ಎಚ್ಚರಿಕೆ    

ಧಾರವಾಡ prajakiran.com:  ಜಲ್ಲೆಯ ಕೆಲವು ಮದುವೆ ಕಾರ್ಯಕ್ರಮಗಳಲ್ಲಿ ೫೦ ಜನ ಮಾತ್ರ ಇರುವ ನಿಯಮ ಮೀರಿ ಹೆಚ್ಚು ಜನ ಸೇರುತ್ತಿರುವುದು ಕಂಡು ಬರುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ  ಪ್ರಕರಣ ದಾಖಲಿಸಿ, ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಪಡೆ ಹಾಗೂ ತಹಸಿಲ್ದಾರಗಳ ಸಭೆ ಜರುಗಿಸಿ, ಮಾತನಾಡಿದರು. ಅತಿ ಜನ ಸೇರುವುದು, ಸಾಮಾಜಿಕ ಅಂತರ ಕಾಪಾಡದಿರುವುದು, ಸ್ಯಾನಿಟೈಸರ್, ಮಾಸ್ಕ್ ಬಳಸದಿರುವುದು ಕಂಡು […]

ರಾಜ್ಯ

ಧಾರವಾಡ ಜಿಲ್ಲಾಧಿಕಾರಿಯಾಗಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ೨೦೧೨ ರ ಐಎಎಸ್ ಬ್ಯಾಚಿನ ನಿತೇಶ್ ಕಲ್ಲನಗೌಡ ಪಾಟೀಲ ಅವರು ಮಂಗಳವಾರ ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಿತೇಶ್ ಪಾಟೀಲ ಅವರು ಮೂಲತ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಕೆರೂಟಗಿ ಗ್ರಾಮದವರು. ಎಸ್‌ಎಸ್‌ಎಲ್‌ಸಿ ವರೆಗೆ ವಿಜಯಪುರದಲ್ಲಿ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಿಯುಸಿ, ಬಳಿಕ ಎನ್‌ಆಯ್‌ಟಿ ಅಲಹಾಬಾದ್‌ನಲ್ಲಿ ಬಿಇ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದರು. ಕೆಲಕಾಲ ಸಾಫ್ಟವೇರ್ ಇಂಜಿನೀಯರ್ ಆಗಿ ಸೇವೆ ಸಲ್ಲಿಸಿದ […]