ರಾಜ್ಯ

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಲು ಒತ್ತಾಯ

ಧಾರವಾಡ prajakiran.com : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಲತಾ ಮುಳ್ಳೂರ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಮಂಜುಳಾ ಆಗ್ರಹಿಸಿದ್ದಾರೆ. 2020-2025 ನೇ ಸಾಲಿನ ಅವಧಿಗಾಗಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಚುನಾವಣೆ ಪ್ರಕ್ರಿಯೆ ದೋಷಪೂರಿತವಾಗಿದೆ. ನಿವೃತ್ತ ಅಧಿಕಾರಿಗಳನ್ನು ಚುನಾವಣಾ ಅಧಿಕಾರಿಗಳಾಗಿ ನೇಮಿಸಿಕೊಂಡಿದ್ದು, ಇಲಾಖೆಗೂ ಅವರಿಗೂ ಸಂಬಂಧವಿಲ್ಲ. ಅವರು ಮನಬಂದಂತೆ ಚುನಾವಣೆ ನಡೆಸುವುದು ಎಷ್ಟರ ಮಟ್ಟಿಗೆ […]

ರಾಜ್ಯ

ಶಾಲಾ, ಕಾಲೇಜುಗಳಿಗೆ ಅನುದಾನ ವಿಸ್ತರಿಸಲು ಆಗ್ರಹಿಸಿ ಪ್ರತಿಭಟನೆ

ಧಾರವಾಡ prajakiran.com : 1995ರ ನಂತರ ಆರಂಭವಾದ ಕನ್ನಡ ಶಾಲಾ, ಕಾಲೇಜುಗಳಿಗೆ ಅನುದಾನ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಸದಸ್ಯರು ಶನಿವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ವೇತನ ಕೊಡಿಸುವುದು. ಎನ್ ಪಿಎಸ್ ರದ್ಧತಿ ಮಾಡುವುದು. ಕಾಲ್ಪನಿಕ ವೇತನ ಬಡ್ತಿಗಾಗಿ ಬಸವರಾಜ ಹೊರಟ್ಟಿ ವರದಿ ಜಾರಿ ಮಾಡಬೇಕು. ಜ್ಯೋತಿ ಸಂಜೀವಿನಿ ಅನುದಾನಿತ ಶಾಲಾ ಸಿಬ್ಬಂದಿಗಳಿಗೂ ವಿಸ್ತರಿಸುವುದು, […]

ರಾಜ್ಯ

ಶಿಕ್ಷಕಿಯರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ಬೆಂಗಳೂರು prajakiran.com : ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಶಿಕ್ಷಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆ  ಆಯುಕ್ತ ಕೆ. ಜೆ. ಜಗದೀಶ  ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಭಾರತದ ಪ್ರಥಮ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆಯನ್ನು ಜನವರಿ 3 ರಂದು ಮಾತೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ದಿನಾಚರಣೆ ಎಂದು ಆಚರಿಸಲು ಆದೇಶ, 2006 ರ ನಂತರ […]

ರಾಜ್ಯ

ನೂತನ ಶಿಕ್ಷಣ ನೀತಿ ಅನುಷ್ಠಾನ ಸಿಸ್ಲೆಪ್ ಸಂಸ್ಥೆಗೆ ಪ್ರಮುಖ ಜವಾಬ್ದಾರಿ

ಧಾರವಾಡ : ಪ್ರಸಕ್ತ ಸಾಲಿನಿಂದ ದೇಶದಾದ್ಯಂತ ಜಾರಿಯಾಗಲಿರುವ ನೂತನ ಶಿಕ್ಷಣ ನೀತಿಯು ಹೊಸ ವಿಶ್ಲೇಷಣೆ ಸಾಮರ್ಥ್ಯ, ಚಿಂತನೆಗಳನ್ನು ಬೆಳೆಸುವ ಗುರಿ ಹೊಂದಿದೆ. ರಾಜ್ಯದಲ್ಲಿ ಈ ನೀತಿಯನ್ನು ಅನುಷ್ಠಾನಕ್ಕೆ ತರುವ ಕಾರ್ಯದಲ್ಲಿ ಧಾರವಾಡದಲ್ಲಿರುವ ರಾಜ್ಯ ಶಾಲಾ ನಾಯಕತ್ವ,ಶೈಕ್ಷಣಿಕ ಯೋಜನೆ ಮತ್ತು ನಿರ್ವಹಣಾ ಸಂಸ್ಥೆ ( ಸಿಸ್ಲೆಪ್) ಗೆ ಪ್ರಮುಖ ಜವಾಬ್ದಾರಿ ನೀಡಲಾಗುವುದು ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್.ಸುರೇಶಕುಮಾರ್ ಹೇಳಿದರು. ನಗರದ ಡಯಟ್ ಆವರಣದಲ್ಲಿ ಇರುವ ಸಿಸ್ಲೆಪ್ ಸಭಾಂಗಣಕ್ಕೆ ಭೇಟಿ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. […]

ರಾಜ್ಯ

ಶಿಕ್ಷಕರ ವರ್ಗಾವಣೆ : ಸಚಿವರ ಪುತ್ರನ ಹೆಸರಿನಲ್ಲಿ ವಂಚನೆ….!

ಅಸಲಿಗೆ ಸಚಿವರಿಗೆ ಪುತ್ರನೇ ಇಲ್ಲ ಶಿಕ್ಷಕರ ಗೋಳು ಕೇಳಿ ಶಿಕ್ಷಣ ಸಚಿವರೇ ಕಳವಳ ಬೆಂಗಳೂರು prajakiran.com : ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ ಮಾತ್ರ ಏಕೈಕ ದಾರಿ. ಆದರೂ ಕೆಲವು ಶಿಕ್ಷಕರು ಹಲವು ಮಾರ್ಗಗಳನ್ನು ಕಂಡುಕೊಂಡಿದ್ದು, ಶಿಕ್ಷಕರನ್ನೇ ಯಾಮಾರಿಸಿದ್ದಾರೆ. ಈ ಬಗ್ಗೆ ಗೋಳು ತೋಡಿಕೊಂಡಿರುವ ಇಬ್ಬರು ಶಿಕ್ಷಕರು ಸಚಿವರ ಪುತ್ರನ ಹೆಸರಿನಲ್ಲಿ ವಂಚನೆಗೆ ಒಳಗಾಗಿರುವುದಾಗಿ ಕಣ್ಣೀರಿಟ್ಟಿದ್ದಾರೆ. ಅಲ್ಲದೆ, ಈಗಾಗಲೇ ವರ್ಷಗಳಿಂದ ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದು, ವರ್ಗಾವಣೆಯೂ ಆಗದೆ ಕಂಗಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಶಿರಗುಪ್ಪ ಹಾಗೂ […]

education minister sureshkumar
ರಾಜ್ಯ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುತ್ತೋಲೆ ಹೊರಡಿಸಿ

ಹುಬ್ಬಳ್ಳಿ prajakiran.com : ರಾಜ್ಯದೆಲ್ಲಡೆ ಇರುವ ವರ್ಗಾವಣೆ ಅಪೇಕ್ಷಿತ ಶಿಕ್ಷಕರಿಗೆ ಶೀಘ್ರವೇ ವರ್ಗಾವಣೆ ಸುತ್ತೋಲೆ ಮತ್ತು ವೇಳಾಪಟ್ಟಿಯನ್ನು ಹೊರಡಿಸಬೇಕೆಂದು ಕರ್ನಾಟಕ ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಹಾಗೂ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ಒತ್ತಾಯಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರಿಗೆ ಮನವಿ ಪತ್ರ ಬರೆದಿರುವ ಅವರು, 5 ವರ್ಷಗಳಿಂದ ಒಂದು ಬಾರಿ ಮಾತ್ರ ವರ್ಗಾವಣೆಯಾಗಿರುವುದರಿಂದ ಸಹಸ್ರ ಸಹಸ್ರ ಶಿಕ್ಷಕರು ವರ್ಗಾವಣೆಗೆ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಹೀಗಾಗಿ ತಾವುಗಳು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಅತೀ […]

ರಾಜ್ಯ

ಹಳ್ಳಿಕಟ್ಟೆ, ಅಗಸಿಯಲ್ಲಿ ಶಾಲೆ ಆರಂಭ

ಕೋವಿಡ್-೧೯ ನಿಂದ ಕಲಿಕೆಗೆ ಹಿನ್ನಡೆ ಮುದ್ರಣಕಾಶಿಯಲ್ಲಿ ಕಲಿಕೆಗೆ “ವಿದ್ಯಾಗಮ” ಜಾರಿ ಮಂಜುನಾಥ ಎಸ್.ರಾಠೋಡ ಗದಗ prajakiran.com : ರಾಜ್ಯದಲ್ಲಿ ಕೋವಿಡ್ ಸೋಂಕು ಆತಂಕ ಸೃಷ್ಟಿಸಿರುವ ವೇಳೆ ಶಾಲೆಗಳು ಬಂದ್‌ ಆಗಿದ್ದರೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕಲಿಕೆಯಿಂದ ದೂರ ಉಳಿಯ ಬಾರದೆಂದು ಸರ್ಕಾರ ಜಾರಿಗೆ ತಂದಿರುವ “ವಿದ್ಯಾ ಗಮ’ ಕಾರ್ಯಕ್ರಮ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದೆ. ಮನೆ ಮುಂದಿನ ಜಗಲಿ, ಊರ ಮಧ್ಯದ ಅರಳೀಮರ, ದೇವಸ್ಥಾನದ ಆವರಣಗಳೇ ಈಗ ಹೊಸ ಶಾಲೆಗಳು. ಗ್ರಾಮೀಣ ಭಾಗದ ಮಕ್ಕಳಿಗೆ ಇಲ್ಲಿಯೇ ಇದೀಗ ಪಾಠ–ಪ್ರವಚನ ಆರಂಭಗೊಂಡಿದೆ. […]

ಜಿಲ್ಲೆ

ಗ್ರಾಮೀಣ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಜಗದೀಶ ಯಾದವ್

ಚಿತ್ರದುರ್ಗ prajakiran.com : ಜಿಲ್ಲೆಯ ಹಿರಿಯೂರ ತಾಲೂಕಿನ ಕರಿಯೋಬನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗದೀಶ ಯಾದವ್ ಅವರನ್ನು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಂಘದ ರಾಜ್ಯಾಧ್ಯಕ್ಷರಾದಅಶೋಕ.ಎಮ್.ಸಜ್ಜನ.ರಾಜ್ಯ ಪ್ರ.ಕಾ.ಮಲ್ಲಿಕಾರ್ಜುನ ಉಪ್ಪಿನ  ನೇಮಕ ಮಾಡಿದ್ದಾರೆ. ಸಂಘದ ಪದಾಧಿಕಾರಿಗಳಾದ ಆರ್.ಎಮ್.ಕಮ್ಮಾರ.ಧರ್ಮಣ್ಣ ಭಜಂತ್ರಿ.ವಾಯ್.ಎಚ್.ಮಾಚೇನಹಳ್ಳಿ.ಈರಣ್ಣ ಸೊರಟೂರ ನಾಗರಾಜ ಆತಡಕರ ಅಭಿನಂದಂದಿಸಿ ಶುಭ ಕೋರಿದ್ದಾರೆ. Share on: WhatsApp

ಜಿಲ್ಲೆ

ದ.ಕ. ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷೆಯಾಗಿ ಮಂಜುಳಾ ನೇಮಕ

ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಬೆಳ್ತಂಗಡಿ ತಾಲೂಕಿನ ಉಜಿರೆ ಪಟ್ಟಣದ ಗುರಿಪಳ್ಳ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಮಂಜುಳ.ಜೆ.ಟಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಅಶೋಕ.ಎಮ್.ಸಜ್ಜನ.ರಾಜ್ಯ ಪ್ರ.ಕ.ಮಲ್ಲಿಕಾರ್ಜುನ ಉಪ್ಪಿನ ಈ ನೇಮಕ ಮಾಡಿದ್ದಾರೆ. ಇವರಿಗೆ ರಾಜ್ಯ ಪದಾಧಿಕಾರಿಗಳಾದ ನಾಡೋಜ ಮಹೇಶ ಜೋಶಿ ಎಮ್.ವಿ. ಕುಸುಮಾ ಜಿ.ಟಿ.ಲಕ್ಷ್ಮಿದೇವಮ್ಮ ಎಲ್.ಆಯ್.ಲಕ್ಕಮ್ಮನವರ ಮುಂತಾದವರು ಅಭಿನಂದಿಸಿದ್ದಾರೆ. Share on: WhatsApp

ರಾಜ್ಯ

ಶಿಕ್ಷಕರ ಸಂಘದ ಸಹ ಕಾರ್ಯದರ್ಶಿಯಾಗಿ ಸೊಣ್ಣಪ್ಪ ನೇಮಕ

ಹುಬ್ಬಳ್ಳಿ prajakiran.com : ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕದ  ಸಹ ಕಾರ್ಯದರ್ಶಿಯಾಗಿ ಟಿ.ಸೊಣ್ಣಪ್ಪ ನೇಮಕಗೊಂಡಿದ್ದಾರೆ. ಸೋಣ್ಣಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೇವಲಾಪುರ ಗ್ರಾಮದ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು, ಅವರು ವಿವಿಧ ಸಾಮಾಜಿಕ ಸೇವಾ ಕಾರ್ಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಟಿ. ಸೊಣ್ಣಪ್ಪ ಇವರನ್ನು ರಾಜ್ಯಾಧ್ಯಕ್ಷ ಅಶೋಕ ಸಜ್ಜನ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ ನೇಮಕ ಮಾಡಿದ್ದಾರೆ. ಅಲ್ಲದೆ, ರಾಜ್ಯ ಸಂಘ ಹಾಗೂ ಜಿಲ್ಲಾ ಸಂಘದ […]