ರಾಜ್ಯ

ಧಾರವಾಡ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಸೇರಿ ಹಲವರ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾಪಂಚಾಯತ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದ ತನಿಖೆ ಗುರುವಾರ ಮತ್ತಷ್ಟು ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳ ತಂಡ ತನಿಖೆ ಮುಂದುವರೆಸಿದ್ದು, ಗುರುವಾರ ಧಾರವಾಡ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಹಾಗೂ ಯೋಗೀಶಗೌಡ ಗೌಡರ ಪತ್ನಿ ಮಲ್ಲಮ್ಮಅವರನ್ನು ಕರೆದು ಮೂವರನ್ನು ಪ್ರತ್ಯೇಕ ವಿಚಾರಣೆ ನಡೆಸಿದರು. ಈ ಮೂವರು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿದರು.  ಸಿಬಿಐ ಅಧಿಕಾರಿಗಳ […]

ರಾಜ್ಯ

ಧಾರವಾಡದ ಯೋಗೀಶಗೌಡ ಕೊಲೆ ಸಾಕ್ಷ್ಯ ನಾಶ ಆರೋಪ : ದೂರು ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಿದ ಸಿಬಿಐ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಸಾಕ್ಷ್ಯ ನಾಶವಾಗಿರುವುದು ಸಿಬಿಐ ತನಿಖೆ ವೇಳೆ ದೃಢ ಪಟ್ಟಿದೆ. ಹೀಗಾಗಿ ಸಾಕ್ಷ್ಯ ನಾಶ ಮಾಡಿದವರ ವಿರುದ್ದ ದೂರು ದಾಖಲಿಸಲು ಅನುಮತಿ ನೀಡಬೇಕು ಎಂದು ಸಿಬಿಐ ಅಧಿಕಾರಿಗಳ ತಂಡ ಬುಧವಾರ ನ್ಯಾಯಾಲಯದ ಅನುಮತಿ ಕೋರಿದೆ. ಧಾರವಾಡ ನ್ಯಾಯಾಲಯಕ್ಕೆ ಹಾಜರಾದ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ, ಹಿರಿಯ ಪೊಲೀಸರು ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು […]

ರಾಜ್ಯ

ಧಾರವಾಡ ಜಿ.ಪಂ. ಸದಸ್ಯ ಯೋಗೀಶ್‌ಗೌಡ ಕೊಲೆ‌ ಪ್ರಕರಣ : ಸಿಬಿಐನಿಂದ ಕಾಂಗ್ರೆಸ್ ಮುಖಂಡನ ವಿಚಾರಣೆ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ  ಗೌಡರ ಕೊಲೆ‌ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳ ತಂಡ ಮತ್ತಷ್ಟು ಚುರುಕುಗೊಳಿಸಿದೆ. ಧಾರವಾಡದಲ್ಲಿಯೇ ಬಿಡಾರ ಹೂಡಿರುವ ಸಿಬಿಐ  ಅಧಿಕಾರಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಹನುಮಂತ ಕೊರವರ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಮಧ್ಯಾಹ್ನ ವಿಚಾರಣೆಗೆ ಹಾಜರಾದ ಕಾಂಗ್ರೆಸ್ ಮುಖಂಡ ಹನುಮಂತ ಕೊರವರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಒಡನಾಟ ಹೊಂದಿದ ಆರೋಪದ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ವಿಜಯ ಕುಲಕರ್ಣಿ ಸಿಬಿಐ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿಯವರನ್ನು ವಿಚಾರಣೆಗೆ ಒಳಪಡಿಸಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಬೆಂಗಳೂರಿನ ಸಿಬಿಐ ಕಚೇರಿಯಲ್ಲಿಯೇ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ ಕುಲಕರ್ಣಿಯವರ ಸಿಬಿಐ ವಿಚಾರಣೆ ಆರಂಭವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ರಾಜಕಾರಣದಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದೆ. ಈಗಾಗಲೇ ಹಲವರನ್ನು ತೀವ್ರ ವಿಚಾರಣೆಗೆ […]

ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣ : ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ

ಬೆಂಗಳೂರು prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿವೃತ್ತ ಪೊಲೀಸ್ ಆಯುಕ್ತ ಸೇರಿ 6 ಪೊಲೀಸರ ವಿಚಾರಣೆ ನಡೆದಿದೆ ಅಂದಿನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಾಂಡುರಂಗ ರಾಣೆ, ಡಿಸಿಪಿಗಳಾದ ಮಲ್ಲಿಕಾರ್ಜುನ ಬಾಲದಂಡಿ, ಜಿನೇಂದ್ರ ಖಣಗಾವಿ, ಧಾರವಾಡ ಎಸಿಪಿ ವಾಸುದೇವ ನಾಯ್ಕ, ಅಂದಿನ ಉಪನಗರ ಪೊಲೀಸ್ ಇನ್ಸಪೆಕ್ಟರ್ ಗಳಾದ ಚನ್ನಕೇಶವ ಟಿಂಗರಿಕರ್ ಹಾಗೂ ಮೋತಿಲಾಲ್ ಪವಾರ್ ಸೇರಿ ಹಲವು ಪೊಲೀಸರ ವಿಚಾರಣೆಯನ್ನು ಸಿಬಿಐ ಅಧಿಕಾರಿಗಳ ತಂಡ ನಡೆಸಿದೆ […]

ರಾಜ್ಯ

ಧಾರವಾಡ : ಪೊಲೀಸ್ ಇನ್ಸಪೆಕ್ಟರ್ ಮೋತಿಲಾಲ್ ಪವಾರ್ ವಿಚಾರಣೆ ನಡೆಸಿದ ಸಿಬಿಐ

ಧಾರವಾಡ prajakiran.com : ಧಾರವಾಡದ ಜಿಲ್ಲಾ ಪಂಚಾಯತ್ ಹೆಬ್ಬಳ್ಳಿ ಮತಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ತಂಡ ಶುಕ್ರವಾರ ಹಲವರನ್ನು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದರು. ಅದರಲ್ಲೂ ವಿಶೇಷವಾಗಿ ಈ ಹಿಂದೆ ಧಾರವಾಡದ ಉಪನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಆಗಿದ್ದ ಮೋತಿಲಾಲ್ ಪವಾರ್ ಅವರನ್ನು ಹಲವು ಗಂಟೆಗಳ ಕಾಲ ಸಿಬಿಐ ತೀವ್ರ ವಿಚಾರಣೆ ನಡೆಸಿದರು. ಇವರು ಯೋಗೀಶ್ ಗೌಡರ ಕೊಲೆ ಪ್ರಕರಣದ ಕುರಿತು ನ್ಯಾಯಾಲಯಕ್ಕೆ ಚಾರ್ಜ್ […]