dist hospital dharwad
ಜಿಲ್ಲೆ

ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ 50 ಆಕ್ಸಿಜನ್ ಸಹಿತ ಬೆಡ್ 

ಕೋವಿಡ್ ಕಾಳಜಿ ಕೇಂದ್ರಗಳ ಸ್ಥಾಪನೆ

ಧಾರವಾಡ prajakiran.com : ಜಿಲ್ಲಾ ಆಸ್ಪತ್ರೆ, ಕಿಮ್ಸ್ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದೆ.

ತಾಲೂಕಾ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಆಕ್ಸಿಜನ್ ಸೌಲಭ್ಯವಿರುವ 50 ಬೆಡ್ ವ್ಯವಸ್ಥೆ ಮಾಡಲಾಗಿದೆ.

ಕುಂದಗೋಳ, ನವಲಗುಂದದಲ್ಲಿ 3 ವೆಂಟಿಲೇಟರ್ ಗಳ ಸೌಲಭ್ಯ ನೀಡಲಾಗಿದೆ. ಮತ್ತು ಜಿಲ್ಲೆಯ 32 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಚಿಕಿತ್ಸೆಗಾಗಿ ತಲಾ 6 ಬೆಡ್ ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಎಲ್ಲ ತಾಲೂಕುಗಳಲ್ಲಿಯೂ ಕೋವಿಡ್ ಕಾಳಜಿ (ಕೆರ್) ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ
ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಕಂಡುಬಂದಿರುವ ಕುರಿತು ವರದಿಗೆ ಸೂಚನೆ :
ಈ ಕುರಿತು ಪರಿಶೀಲಿಸಿ, ವರದಿ ನೀಡಲು ಡಿಎಚ್ಓ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *