ರಾಜ್ಯ

ಪ್ರತಿಭಟನೆ ಕೈಬಿಟ್ಟ ಶಿಕ್ಷಕರ ಸಂಘಟನೆಗಳು

ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮುಕ್ತ ಮನಸ್ಸು

ಮೂರು ತಿಂಗಳಲ್ಲಿ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ – ಸಚಿವ ಸಿ.ಸಿ.ಪಾಟೀಲ

ಧಾರವಾಡ prajakiran.com : ಶಿಕ್ಷಕರು ಹಾಗೂ ಶಿಕ್ಷಣ ರಂಗದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಕ್ತ ಮನಸ್ಸು ಹೊಂದಿದೆ.

ಕೋವಿಡ್ ಕಾರಣದಿಂದ ಶಿಕ್ಷಣ ಕೇತ್ರದ ಮೇಲೆ ಉಂಟಾಗಿರುವ ಪರಿಣಾಮಗಳಿಂದ ಶಿಕ್ಷಕರೂ ಕೂಡ ಪರಿತಪಿಸುವಂತಾಗಿರುವುದು ಸರ್ಕಾರದ ಗಮನದಲ್ಲಿದೆ.

ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಶಿಕ್ಷಕರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಕೈಬಿಡಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ
ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯದ ವಿವಿಧ ಸಂಘಟನೆಗಳು ನಡೆಸುತ್ತಿರುವ ಸ್ಥಳಕ್ಕೆ ಅವರು ಸರ್ಕಾರದ ಪರವಾಗಿ ಭೇಟಿ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶಕುಮಾರ ಅವರು ನೀಡಿರುವ ಪತ್ರವನ್ನು ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರಿಗೆ ಹಸ್ತಾಂತರಿಸಿದ ಸಚಿವ ಸಿ.ಸಿ.ಪಾಟೀಲ ಅವರು, ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಇರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವುದು.

ಕಾಲ್ಪನಿಕ ವೇತನ ಅನುಷ್ಠಾನದಿಂದ ಆಗುವ ಆರ್ಥಿಕ ಪರಿಣಾಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ ವರದಿ ತಯಾರಿಸಲಾಗುವುದು.ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವಾ ಭದ್ರತೆಗೆ ಕಠಿಣ ಸುತ್ತೋಲೆಯೊಂದಿಗೆ ವಿಚಕ್ಷಣಾ ವ್ಯವಸ್ಥೆ ಮತ್ತಿತರ ಕ್ರಮಗಳ ಬಗ್ಗೆ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.

ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಿ, ಸಚಿವರು ಖುದ್ದಾಗಿ ಬಂದು ಮಾತನಾಡಿರುವುದು ಸಮಾಧಾನ ತಂದಿದೆ. ಸತ್ಯಾಗ್ರಹವನ್ನು ಸದ್ಯ ಮೊಟಕುಗೊಳಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಸೇರಿದಂತೆ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *