ರಾಜ್ಯ

ಟೌಟೆ ಚಂಡಮಾರುತ ಎದುರಿಸಲು ೧ ಸಾವಿರ ಜನ ಸಿಬ್ಬಂದಿ

ಬೆಂಗಳೂರು prajakiran.com : ಟುಡೇ ಚಂಡಮಾರುತವನ್ನು ಸಮರ್ಥವಾಗಿ ಎದುರಿಸಲು NDRF, SDRF ಸೇರಿದಂತೆ ಒಟ್ಟು ಒಂದು ಸಾವಿರ ನುರಿತ ರೆಸ್ಕ್ಯೂ ಆಪರೇಷನ್ ಟೀಮ್ ಅನ್ನು ನಿಯೋಜಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಶನಿವಾರ ಬೆಂಗಳೂರಿನಲ್ಲಿ ಟೌಟೆ ಚಂಡಮಾರುತ ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆಗಳ ಕುರಿತು ಉನ್ನತಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 434 ಜನ sdrf ತಂಡದಲ್ಲಿದ್ದಾರೆ. ಕಲಬುರ್ಗಿ ಮತ್ತು ಬೆಂಗಳೂರುನಲ್ಲಿ‌ಇರುವ sdrf ಸಿಬ್ಬಂದಿಯನ್ನು ಉಡುಪಿಗೆ ಕಳಿಸಲಾಗುವುದು.

ಮಂಗಳೂರಿನಲ್ಲಿ ಎನ್ ಡಿಆರ್ ಎಫ್ ತಂಡ ಇದೆ. ಇದರ ಜೊತೆಗೆ ಅಗ್ನಿಶಾಮಕ, ಪೊಲೀಸ್, ಗೃಹರಕ್ಷಕ, ಕರಾವಳಿ ಕಾವಲು ಪಡೆ ಸೇರಿದಂತೆ ಒಟ್ಟು 1000 ಜನ ನುರಿತ ರೆಸ್ಕ್ಯೂ ಆಪರೇಟರ್ ಗಳನ್ನು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ನಿಯೋಜಿಸಲಾಗಿದೆ.

ಚಂಡಮಾರುತ ಅನ್ನು ಸರ್ವರೀತಿಯಲ್ಲಿ ತಿಳಿಸಲು ಈ ತಂಡ ಸಿದ್ಧವಾಗಿದೆ ಇದಕ್ಕೆ ಈಗಾಗಲೇ ಸಾಕಷ್ಟು ತರಬೇತಿಯನ್ನು ನೀಡಲಾಗಿದೆ ಸೇನೆಯಲ್ಲಿ ಸೇವೆ ಸಲ್ಲಿಸಿದವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಎಸ್ ಡಿ ಆರ್ ಎಫ್ ನಿಧಿ ಈಗಾಗಲೇ 15 ಕೋಟಿ ರೂಪಾಯಿ ವೆಚ್ಚದಲ್ಲಿ ಬಸ್, ಲಾರಿ, ಜೀಪ್ ಸೇರಿದಂತೆ 50ಕ್ಕೂ ಹೆಚ್ಚು ಉಪಕರಣ ಮತ್ತು ವಸ್ತುಗಳನ್ನು ಖರೀದಿ ಮಾಡಲಾಗಿದೆ.

ಡಿಸಾಸ್ಟರ್ ಮ್ಯಾನೇಜ್ಮೆಂಟ್ ನವರು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಗಳಿ ಚಂಡಮಾರುತ ಎದುರಿಸಲು ಸಿದ್ಧವಾಗಿವೆ ಎಂದು ಅವರು ತಿಳಿಸಿದರು.

ಈ ಚಂಡಮಾರುತ ಕೇವಲ ಕರಾವಳಿ ಪ್ರದೇಶ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಇ ಜಿಲ್ಲಾಗಳಲ್ಲಿಯೂ ಅದಕ್ಕೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಅಗ್ನಿಶಾಮಕ ದಳದ ಮುಖ್ಯಸ್ಥರಾದ ಅಮರ್ ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದರು

ಕೋಟ್

ಚಂಡಮಾರುತ ಎದುರಿಸಲು ಇನ್ನೂ ಎರಡು NDRF ತಂಡಗಳನ್ನು ಕಳುಹಿಸಿಕೊಡುವಂತೆ ಕೇಂದ್ರಕ್ಕೆ ಕೋರಲಾಗಿದೆ. ಆ ತಂಡಗಳು ಬಂದರೆ ಇನ್ನಷ್ಟು ಸಮರ್ಪಕವಾಗಿ ಟೌಟೆ ಚಂಡಮಾರುತವನ್ನು ಸಮರ್ಥವಾಗಿ ಎದುರಿಸಲು ಸಾಧ್ಯ.

ಬಸವರಾಜ ಬೊಮ್ಮಾಯಿ
ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *