ರಾಜ್ಯ

ಟೆಂಪಲ್ ರನ್‌ ಮುಂದುವರೆಸಿದ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಟೆಂಪಲ್ ರನ್‌ ಮುಂದುವರೆಸಿದ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಧಾರವಾಡ ಪ್ರಜಾಕಿರಣ.ಕಾಮ್ :

ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಧಾರವಾಡದ ಮುರಘಾಮಠಕ್ಕೆ ಭೇಟಿ ನೀಡಿ, ಶ್ರೀಗಳ ದರ್ಶನ‌ಪಡೆದು ಆರ್ಶೀವಾದ ಪಡೆದರು. ಈ ಸಂದರ್ಭದಲ್ಲಿ ಪ್ರಹ್ಲಾದ ಜೋಶಿ ಅವರಿಗೆ ಮಠಕ್ಕೆ ಬರುತ್ತಿದ್ದಂತೆ ಆರತಿ ಎತ್ತಿ ಸ್ವಾಗತ ಕೋರಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ 20 ಸ್ಥಾಮಗಳಿಗೆ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ. ಸಬಕಾ ಸಾಥ್ ಸಬಕಾ ಸಾಥ್ ವಿಕಾಸದ ಯೋಜನೆಯಡಿ ಎಲ್ಲರಿಗೂ ಟಿಕೆಟ್ ಹಂಚಿಕೆ ಮಾಡಲಾಗಿದೆ.
ನರೇಂದ್ರ ಮೋದಿ ಅವರ ಕಾಲದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ಆಗಿವೆ.

ಈ ಬಾರಿ ನಾನು 3 ವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ. ಅಭಿವೃದ್ಧಿ ಕೆಲಸಗಳಿಂದ ಜನರು ನನಗೆ ಬಹುದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ.

ಕೊಪ್ಪಳದ ಸಂಗಣ ಕರಡಿಯವರನ್ನು ಕರೆದು ಮಾತನಾಡುವೆ. ಕೆಲವೊಂದು ಕಡೆಗಳಲ್ಲಿ ಟಿಕೆಟ್‌ ಮಿಸ್ ಆಗಿವೆ. ಅಲ್ಲಿನ ಪರಿಸ್ಥಿತಿಯನ್ನು ನೋಡಿಕೊಂಡು ನಿರ್ಧಾರ ಮಾಡಿದ್ದಾರೆ.

ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಯಾರೂ ಕೂಡ ಬಿಜೆಪಿ ಬಿಟ್ಟು ಹೋಗುವುದಿಲ್ಲಾ. ನಾನು 4 ಬಾರಿ ಸಂಸದನಾಗಿ ಕೆಲಸ ಮಾಡಿದ್ದೇನೆ. ವಿಕಸಿತ ಭಾರತ ಧಾರವಾಡ ಲೋಕಸಭಾ ಕ್ಷೇತ್ರವೂ ಆಗಿದೆ. ಹೀಗಾಗಿ 5 ನೇ ಬಾರಿಗೆ ನನಗೆ ಜನರು ಆರ್ಶೀವಾದ ಮಾಡುತ್ತಾರೆ ಎಂದು ಜೋಶಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಮಾಜಿ ಮೇಯರ್ ಈರೇಶ ಅಂಚಟಗೇರಿ ಸೇರಿದಂತೆ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *