ಶ್ರೀನಗರ prajakiran.com : ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಮಂಗಳವಾರ ತಡರಾತ್ರಿ ಶ್ರೀನಗರದ ನೌಗಾಮ್ ನ ವಾಗುರಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ.
ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀನಗರದ ಹೊರವಲ ನೌಗಾಮ್ ಪ್ರದೇಶದ ವಗೂರಾದಲ್ಲಿ ಎನ್ ಕೌಂಟರ್ ಪ್ರಾರಂಭವಾಗಿದೆ.
ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದು, ಭದ್ರತಾ ಪಡೆಗಳು ಕಾರ್ಯಪ್ರವೃತ್ತರಾಗಿದ್ದಾರೆ. ಹೆಚ್ಚಿನ ಮಾಹಿತಿ ಶ್ರೀಘ್ರದಲ್ಲೇ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.