ಅಸ್ಸಾಂ prajakiran.com : ನಾಗಾಲ್ಯಾಂಡ್ನ ಧನ್ಸಿರಿ ಪ್ರದೇಶದಲ್ಲಿ ಅಸ್ಸಾಂ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರ ಗುಂಡಿಗೆ 6 ಜನ ಉಗ್ರರು ಬಲಿಯಾಗಿದ್ದಾರೆ.
ಇಂದು ಬೆಳಿಗ್ಗೆ ಅಸ್ಸಾಂ ಗಡಿಯಲ್ಲಿ ರೈಫಲ್ಸ್ ಮತ್ತು ಅಸ್ಸಾಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಶಸ್ತ್ರಸಜ್ಜಿತ ಉಗ್ರರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.
ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೊವಾಲ್ ನೇತೃತ್ವದಲ್ಲಿ ಎನ್ಕೌಂಟರ್ ನಡೆಸಲಾಗಿದೆ.