ಅಂತಾರಾಷ್ಟ್ರೀಯ

ಖಾಸಗಿ ಬಸ್ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಧಾರವಾಡ prajakiran.com : ಜಿಲ್ಲೆಗೆ ಪ್ರತಿದಿನ ವಿವಿಧ ಖಾಸಗಿ ಹಾಗೂ ಸರ್ಕಾರಿ ಬಸ್ ಮೂಲಕ ಹೊರರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ ತಿಳಿಸಿದ್ದಾರೆ.

ವರದಿ ಹೊಂದಿರದಿದ್ದಲ್ಲಿ ಪ್ರತಿ ಪ್ರಯಾಣಿಕರಿಗೆ ಆರ್‍ಟಿಪಿಸಿಆರ್ ಮೂಲಕ ಸ್ಥಳದಲ್ಲಿಯೇ ಕೋವಿಡ್ ಟೆಸ್ಟ್ ಮಾಡಬೇಕು.

ಇದು ಪ್ರತಿ ದಿನ ಪುನರಾವರ್ತನೆಯಾದರೆ ಅಂತಹ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿ ಅಂತಹ ಬಸ್‍ನ್ನು ಪ್ರಯಾಣಿಕರ ಸಮೇತ ಮರಳಿ ಕಳುಹಿಸಬೇಕು ಅಥವಾ ಸೀಜ್ ಮಾಡಬೇಕೆಂದು ಪಾಲಿಕೆಯ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಧಾರವಾಡ ಜಿಲ್ಲಾಧಿಕಾರಿ ಕಡಕ್ ಸೂಚನೆ ನೀಡಿದ್ದಾರೆ.

ಜಿಲ್ಲೆಯಿಂದ ಪ್ರತಿನಿತ್ಯ ನೂರಾರು ಬಸ್ ಗಳು ಹೊರ ರಾಜ್ಯಕ್ಕೆ ತೆರಳುತ್ತವೆ. ಮತ್ತು ಅಲ್ಲಿಂದ ಜಿಲ್ಲೆಗೆ ಕೂಡ ಆಗಮಿಸುತ್ತವೆ.

ಇದರಿಂದಾಗಿ ಸಾವಿರಾರು ಪ್ರಯಾಣಿಕರ ಆರೋಗ್ಯ ದೃಷ್ಟಿಯಿಂದ ಕಟ್ಟುನಿಟ್ಟಾಗಿ ಪಾಲಿಸಬೇಕಾದ ನಿಯಮಗಳು ಕುರಿತು ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.

ಇದು ಎಷ್ಟರ ಮಟ್ಟಿಗೆ ಪಾಲನೆ ಆಗುತ್ತದೆ ಎಂಬುದನ್ನು ಬರುವ ದಿನಗಳಲ್ಲಿ ಕಸದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *