hubli kims
ಜಿಲ್ಲೆ

ಧಾರವಾಡದಲ್ಲಿ ಒಂದೇ ದಿನ ಸಾವಿರ ಗಡಿ ದಾಟಿದ ಸೋಂಕಿತರು,8 ಜನ ಸಾವು…..!

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.

500ರಿಂದ 700 ರವರೆಗೆ ಸಮೀಪ  ಹೋಗುತ್ತಿದ್ದ ಸೋಂಕಿತರ ಸಂಖ್ಯೆ ಬುಧವಾರ ಸಾವಿರದ ಗಡಿ ದಾಟಿದೆ.

ಜಿಲ್ಲೆಯಲ್ಲಿ ಇಂದು ಬರೋಬ್ವರಿ 1030 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ದುರಂತದ ಸಂಗತಿಯೆಂದರೆ ಒಟ್ಟು 8 ಸೋಂಕಿತರು ಸಾವಿಗೀಡಾಗಿದ್ದಾರೆ.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಆರು ಜನ ಸಾವನ್ನಪ್ಪಿದರೆ, ಲೈಪ್ ಲೈನ್ ನಲ್ಲಿ ಮತ್ತು ಧಾರವಾಡ ಜಿಲ್ಲೆಯ ಆಸ್ಪತ್ರೆಯಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.

ಆತಂಕದ ವಿಚಾರವೆಂದರೆ 360 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ ಮೂಲಕ ಧಾರವಾಡ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 5445 ಕ್ಕೆ ಎರಿಕೆ ಆಗಿದೆ.

ಸಮಾಧಾನದ ಸಂಗತಿಯೆಂದರೆ ಆಸ್ಪತ್ರೆಯಿಂದ 292 ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *