ರಾಜ್ಯ

ಮಂಡ್ಯದಲ್ಲಿ ಮೂರು ಪೊಲೀಸ್ ಠಾಣೆ ಸೀಲ್ ಡೌನ್

ಮಂಡ್ಯ prajakiran.com : ಕೆ.ಆರ್.ಪೇಟೆ ಟೌನ್ ಪೋಲಿಸ್ ಠಾಣೆಯ  ಮುಖ್ಯಪೇದೆಯೊಬ್ಬರಿಗೆ ಕರೋನಾ ಪಾಸಿಟೀವ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ  ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಗಳನ್ನು  ಸೀಲ್ ಡೌನ್ ಮಾಡಲಾಗಿದೆ. 

ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ.

ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು 30 ಜನ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಕೋವಿಡ್-19 ಕರ್ತವ್ಯಕ್ಕೆ ಧಕ್ಕೆ ಉಂಟಾಗದಂತೆ ವಿಶೇಷ ಪೋಲಿಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಕ್ವಾರಂಟೈನ್ ಕೇಂದ್ರಗಳಿಗೆ ವಿಶೇಷ ಭದ್ರತೆಯನ್ನು ಒದಗಿಸಲಾಗಿದೆ.

ಗ್ರಾಮಕ್ಕೆ ಹೊರ ರಾಜ್ಯಗಳಿಂದ ಕಳ್ಳತನದಿಂದ ಕದ್ದು ನುಸುಳಿ ಆಗಮಿಸಿರುವ ಜನರ ಬಗ್ಗೆ ಗ್ರಾಮಸ್ಥರು ಕೂಡಲೇ ಮಾಹಿತಿಯನ್ನು ನೀಡಬೇಕು.

ತಾಲ್ಲೂಕಿಗೆ ಯಾರೇ ಹೊಸದಾಗಿ ಆಗಮಿಸಿದರೆ 14ದಿನಗಳು ಹೋಂ ಕ್ವಾರಂಟೈನ್ ನಲ್ಲಿರುವುದು, ಕರೋನಾ ಸ್ವಾಬ್ ಟೆಸ್ಟ್ ಗೆ ಒಳಗಾಗುವುದು ಕಡ್ಡಾಯವಾಗಿದೆ ಎಂದು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಂ ಅವರು ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ಡಿವೈಎಸ್ ಪಿ ಅರುಣ್ ನಾಗೇಗೌಡ, ನಾಗಮಂಗಲ ಡಿವೈಎಸ್ ಪಿ ಕೆ.ಬಿ.ವಿಶ್ವನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಗಳಾದ ಸುಧಾಕರ್, ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಗಳಾದ ಬ್ಯಾಟರಾಯಗೌಡ, ಡಿ.ಲಕ್ಷ್ಮಣ್ ಮತ್ತು ಪೋಲಿಸ್ ಸಿಬ್ಬಂದಿ ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *