ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮತ್ತೆ ಹೊಸದಾಗಿ 188 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4835 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಧಾರವಾಡ ಜಿಲ್ಲೆಯಲ್ಲಿಮಂಗಳವಾರವೂ 8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 163 ಕ್ಕೆ ಏರಿದಂತಾಗಿದೆ. ಮಂಗಳವಾರ ಜಿಲ್ಲೆಯಲ್ಲಿ 293 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ ಜನರು 2226 ಬಿಡುಗಡೆಗೊಂಡತಾಗಿದೆ. ಇನ್ನೂ 2446 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ ಎಂದು ವಿವರಿಸಿದೆ. |
ಇದಲ್ಲದೆ, ಇನ್ನೂ40 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಲಾಗಿದೆ.
ಜಿಲ್ಲೆಯಲ್ಲಿ ಮಂಗಳವಾರ ಎಂಟು ಜನರು ಚಿಕಿತ್ಸೆ ಫಲಿಸದೆ ಜಿಲ್ಲೆಯ ವಿವಿಧ ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೇಟಿನ್ ವಿವರಿಸಿದೆ.