ಅಹಮದಾಬಾದ್ prajakiran.com : ‘ತೌಕ್ತೆ’ ಚಂಡಮಾರುತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್ ಸರ್ಕಾರ ಘೋಷಿಸಿದೆ.
ಈ ಕುರಿತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮಾಹಿತಿ ನೀಡಿದ್ದು, ‘ತೌಕ್ತೆ’ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ಹೇಳಿದ್ದಾರೆ.
ಗುಜರಾತ್ ಸರ್ಕಾರದ ವರದಿ ಪ್ರಕಾರ 45 ಜನರು ‘ತಾಕ್ತೆ’ ಅಬ್ಬರಕ್ಕೆ ಜೀವ ಕಳೆದುಕೊಂಡಿದ್ದಾರೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿ ಗುಜರಾತ್ಗೆ ಭೇಟಿ, ಚಂಡಮಾರುತದಿಂದ ಉಂಟಾದ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಿದರು.
ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದ ಬೆನ್ನಲ್ಲೇ ತಕ್ಷಣದ 1,000 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದ್ದರು.