ಅಂತಾರಾಷ್ಟ್ರೀಯ

ಸೇನಾ ಮುಖ್ಯಸ್ಥರ ದುರ್ಮರಣ ವಿಕೃತಿ ಮೆರೆದವರ ವಿರುದ್ಧ ಕಾನೂನು ಕ್ರಮ

ಸೇನಾ ಮುಖ್ಯಸ್ಥರ ದುರ್ಮರಣ: ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ಹಾವೇರಿ prajakiran.com, ಡಿ. 10 : ಬಿಪಿನ್ ರಾವತ್ ಅವರ ನಿಧನಕ್ಕೆ ಸಂಬಂಧಿಸಿದಂತೆ ಕೆಲವು ವಿಕೃತ ಮನಸ್ಸುಗಳು ಬೇಕಾಬಿಟ್ಟಿ , ಸಂಭ್ರಮಾಚರಣೆಯ ಟ್ವೀಟ್‍ಗಳನ್ನು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಇಂದು ನಡೆದ ಚುನಾವಣೆಯಲ್ಲಿ ಅವರು ಶಿಗ್ಗಾಂವ್ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನು ಪ್ರತಿ ಭಾರತೀಯನೂ ಅತ್ಯಂತ ಕಠಿಣ ಶಬ್ಧಗಳಲ್ಲಿ ಖಂಡಿಸಬೇಕು. ದೇಶಕ್ಕಾಗಿ ದೊಡ್ಡ ಸೇನೆಯನ್ನು ಮುನ್ನಡೆಸಿ ರಕ್ಷಣೆ ಮಾಡುತ್ತಿದ್ದವರ ಬಗ್ಗೆ, ಆ ಹುದ್ದೆಯ ಘನತೆಯ ಕುರಿತು ಪರಿಕಲ್ಪನೆ ಇಲ್ಲದೆ ಅತ್ಯಂತ ಬೇಜವಾಬ್ದಾರಿಯಿಂದ ಟ್ವೀಟ್ ಮಾಡಿರುವವರ ಕೃತ್ಯಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್, ಟ್ವೀಟ್ ಮಾಡಿರುವವರ ವಿಳಾಸವನ್ನು ಪತ್ತೆ ಮಾಡಿ ಕೂಡಲೇ ಪ್ರಕರಣ ದಾಖಲು ಮಾಡಿ ಕಾನೂನಾತ್ಮಕ ಕ್ರಮವನ್ನು ತೆಗೆದುಕೊಳ್ಳಲಾಗುವುದು.

ಈ ವಿಕೃತಿಯನ್ನು ಕ್ಷಮಿಸುವ ಮಾತಿಲ್ಲ. ಖಂಡಿತವಾಗಿ ಶಿಕ್ಷೆ ಆಗಲೇಬೇಕು ಎಂದರು.

ಹೆಲಿಕಾಪ್ಟರ್ ದುರಂತದಲ್ಲಿ ಮರಣವನ್ನಪ್ಪಿರುವ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ಅವರ ಅಂತ್ಯಕ್ರಿಯೆ ಇಂದು ನೆರವೇರಲಿದ್ದು, ಕನ್ನಡನಾಡಿನ ಪರವಾಗಿ ಗೌರವ ಮತ್ತು ಶ್ರದ್ಧಾಂಜಲಿಯನ್ನು ಅರ್ಪಿಸುವುದಾಗಿ ತಿಳಿಸಿದರು.

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮ್ಯಾಂಡ್ ಆಸ್ಪತ್ರೆಯಲ್ಲಿ ಭೇಟಿಯಾಗಿದ್ದು, ಅತ್ಯುತ್ತಮ ಚಿಕಿತ್ಸೆಯನ್ನು ಪರಿಣಿತ ವೈದ್ಯರ ತಂಡ ನೀಡುತ್ತಿದ್ದಾರೆ.

ಅವರು ಶೀಘ್ರವಾಗಿ ಗುಣಮುಖರಾಗುವಂತೆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

*ಬೆಳಗಾವಿ ಅಧಿವೇಶನ:*
ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದಿಂದ ಕಾನೂನು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಶ್ನೋತ್ತರ ಇರುತ್ತದೆ. ಪ್ರತಿಪಕ್ಷದವರು ಎತ್ತುವ ವಿಚಾರಗಳಿಗೆ ಸೂಕ್ತ ಉತ್ತರ ನೀಡಲು ಸಿದ್ಧರಿದ್ದೇವೆ ಎಂದರು.

*ಹಕ್ಕಿಜ್ವರ:* ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಬಗ್ಗೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪ್ರತಿಕ್ರಯಿಸಿ, ಈ ಬಗ್ಗೆ ಸಭೆ ನಡೆಸಲಾಗಿದ್ದು, ಸೂಕ್ತ ಲಸಿಕೆ, ಔಷಧಿಗಳ ಪೂರೈಕೆ ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸಲು ತಿಳಿಸಲಾಗಿದೆ.

ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದಿಂದ ಮಾರ್ಗದರ್ಶನವನ್ನು ನಿರೀಕ್ಷಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *