ಧಾರವಾಡ prajakiran.com : ಬುಧವಾರ ಬೆಳ್ಳಂ ಬೆಳಗ್ಗೆ ಕ್ಯಾಂಟರ್ ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಧಾರವಾಡದ ಹೊರವಲಯದಲ್ಲಿರುವ ಕ್ಯಾರಕೊಪ್ಪ ಬಳಿ ಸಂಭವಿಸಿದೆ.
ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡದ ಗ್ರಾಮೀಣ ಠಾಣೆ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಕ್ಯಾಂಟರ್ನಲ್ಲಿದ್ದ ನಾಲ್ವರ ಬಗ್ಗೆ ಮಾಹಿತಿ ತಿಳಿದುಬರಬೇಕಿದೆ.
ಈ ಕುರಿತು ಧಾರವಾಡದ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.