ಧಾರವಾಡ prajakiran.com : ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ಧಾರವಾಡದ ದಾಸನಕೋಪ್ಪ ಸರ್ಕಲ್ ಬಳಿ ನಡೆದಿದೆ.
ಈ ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.
ಕೂಡಲೇ ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಪೊಲೀಸರು ವಾಹನ ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಅಪಘಾತದಿಂದ ಕಾರು ಜಖಂಗೊಂಡಿದ್ದು ಧಾರವಾಡ ಸಂಚಾರಿ ಪೊಲೀಸ್ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಜರುಗಿಸಿದರು.