ರಾಜ್ಯ

ದೆಹಲಿಯಿಂದ ಧಾರವಾಡಕ್ಕೆ ಆಗಮಿಸಿದ ಇಬ್ಬರು ಯುವಕರಿಗೆ ಕರೋನಾ

ಧಾರವಾಡ prajakiran.com  : ವಿದ್ಯಾನಗರಿ  ಧಾರವಾಡದ ಜಿಲ್ಲೆಯಲ್ಲಿ ಶುಕ್ರವಾರ ಮತ್ತಿಬ್ಬರಿಗೆ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಸೋಂಕಿತರನ್ನು ಪಿ-1609ನೇ ಸೋಂಕಿತ 22 ವರ್ಷದ ಪುರುಷ ಹಾಗೂ ಪಿ-1610 ಸೋಂಕಿತ 23ವರ್ಷದ ಪುರುಷ ಇವರಿಬ್ಬರು  ನವದೆಹಲಿಯಿಂದ ರೈಲಿನ ಮೂಲಕ ಹಿಂದಿರುಗಿರುವ  ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. 

ಈ ಇಬ್ಬರೂ ಯುವಕರನ್ನು ಧಾರವಾಡ ಜಿಲ್ಲೆಗೆ ಆಗಮಿಸಿದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು.

ಆ ಮೂಲಕ ಧಾರವಾಡ  ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ  33 ಕ್ಕೆ ಏರಿಕೆಯಾಗಿದೆ. ಈಗಾಗಲೇ  ಜಿಲ್ಲೆಯ 9 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇನ್ನುಳಿದ 24 ಜನ  ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಹೊರ ರಾಜ್ಯದಿಂದ ಆಗಮಿಸುವವರಿಂದಲೇ ಧಾರವಾಡ ಜಿಲ್ಲೆಯ  ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇರುವುದು ಜನತೆಗೆ ಮತ್ತಷ್ಟು ಆತಂಕ ತರಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *