ಅಂತಾರಾಷ್ಟ್ರೀಯ

ಮಾಜಿ ಸಚಿವ ಸಿ.ಎಂ. ಉದಾಸಿ ವಿಧಿವಶ….!

ಬೆಂಗಳೂರು prajakiran.com : ಮಾಜಿ ಸಚಿವರು ಹಾಗೂ ಹಾನಗಲ್ ಕ್ಷೇತ್ರದ ಹಾಲಿ ಬಿಜೆಪಿ ಶಾಸಕರು ಆಗಿದ್ದ ಸಿ ಎಂ ಉದಾಸಿ (81) ಅವರು ಮಂಗಳವಾರ ವಿಧಿವಶರಾದರು‌.

ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಚಿಕಿತ್ಸೆ ಫಲಿಸದೆ ಅವರು ಮಧ್ಯಾಹ್ನ 2.50ಕ್ಕೆ ಇಹಲೋಕ ತ್ಯಜಿಸಿದರು.
ನಾಳೆ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಅವರು ಪತ್ನಿ, ಪುತ್ರ ಹಾವೇರಿ ಸಂಸದ ಶಿವಕುಮಾರ್ ಉದಾಸಿ ಸೇರಿದಂತೆ ಹಲವರನ್ನು ಅಗಲಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಲೋಕೋಪಯೋಗಿ ಖಾತೆಗಳನ್ನು ನಿರ್ವಹಿಸಿದ್ದರು.

ಅವರು 1994ರಲ್ಲಿ ಜೆ.ಹೆಚ್.ಪಟೇಲ್ ರ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದರು.

6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ
ಉದಾಸಿ ಅವರು ಏಳು ಭಾಷೆಗಳನ್ನು ಬಲ್ಲ ಧೀಮಂತ ನಾಯಕರಾಗಿದ್ದರು.

ಅಂತಹ ಮುತ್ಸದ್ದಿ ನಾಯಕನನ್ನು ಕಳೆದುಕೊಂಡು ರಾಜ್ಯ ಈಗ ಬಡವಾಗಿದೆ. ಇದರಿಂದ ಕರ್ನಾಟಕ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಕಂಬನಿ ಮಿಡಿದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *