ಬೆಂಗಳೂರು Prajakiran.com : ಕೋವಿಡ್ ಸೋಂಕು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ ಲಾಕ್ ಘೋಷಣೆ ಮಾಡಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಬಿ. ಎಸ್ ಯಡಿಯೂರಪ್ಪ, 16 ಜಿಲ್ಲೆಗಳಲ್ಲಿ ಶೇಕಡಾ 5 ರಷ್ಟು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ.
ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಇನ್ನೂ ರಾಜ್ಯದಲ್ಲಿ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಪ್ರತಿ ದಿನ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಹಾಗೂ ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಿಗ್ಗ 5ರ ವರೆಗೆ ಜಾರಿಯಲ್ಲಿರಲಿದೆ.
ಬಸ್ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಇನ್ನುಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ಶೇ 50 ರಷ್ಟು ಅನುಮತಿ ನೀಡಿ, ಕೋಳಿ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ.