ಧಾರವಾಡ prajakiran.com : ಧಾರವಾಡ ಜಿಲ್ಲೆಯ ಪಾಸಿಟಿವಿಟಿ ರೇಟ್ ಶೇ. 5ಕ್ಕಿಂತ ಕಡಿಮೆ ಇರುವುದರಿಂದ ಕೊನೆಗೂ ಜಿಲ್ಲೆಗೆ ಅನ್ ಲಾಕ್ ಭಾಗ್ಯ ಸಿಕ್ಕಿದೆ.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಆದೇಶ ಹೊರಡಿಸಿದ್ದಾರೆ.
ನಿನ್ನೆ ಮುಖ್ಯಮಂತ್ರಿ ಸೋಮವಾರದಿಂದ ರಾಜ್ಯದ 16 ಜಿಲ್ಲೆಗಳಲ್ಲಿ ಅನ್ ಲಾಕ್ ಘೋಷಣೆ ಮಾಡಿದ್ದರು.
ಈ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡಿ ಅನ್ ಲಾಕ್ ಮಾಡುವಂತೆ ಗಮನ ಸೆಳೆದಿದ್ದರು.
ಹೀಗಾಗಿ ಧಾರವಾಡ ಜಿಲ್ಲೆಯಲ್ಲಿಯೂ ನಾಳೆಯಿಂದ ಜೂ. 21 ರಿಂದ ಜು.5 ರವರೆಗೆ ಸೋಮವಾರದಿಂದ ಶೇ. 50 ರಷ್ಟು
ಬಸ್ ಸಂಚಾರಕ್ಕೆ ಅನುಮತಿ
ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ.
ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗಿದೆ.
ಜೊತೆಗೆ ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
ಸರ್ಕಾರಿ/ಖಾಸಗಿ ಕಚೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
ಇವೆಲ್ಲಾ ಧಾರವಾಡ ಜಿಲ್ಲೆಯ ಜನರಿಗೆ ಕೊನೆಗೂ ದೊರೆತಿರುವುದು ಸಮಾಧಾನದ ಸಂಗತಿಯಾಗಿದೆ.