ರಾಜ್ಯ

ಜುಲೈ 5 ರಿಂದ 19ರವರೆಗೆ ರಾಜ್ಯದಲ್ಲಿ ಮತ್ತಷ್ಟು ಅನ್ ಲಾಕ್ ಜಾರಿ

ಬೆಂಗಳೂರು prajakiran.com : ರಾಜ್ಯದಲ್ಲಿ ಜುಲೈ 5ರಿಂದ ಸೋಮವಾರ ಕರೋನಾ ನಿಯಮಗಳನ್ನು ಮತ್ತಷ್ಟು ಸಡಿಲಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಅಲ್ಲದೆ, ಈ ಹದಿನೈದು ದಿನಗಳಲ್ಲಿ ಸೋಂಕು ನಿಂಯತ್ರಣಕ್ಕೆ ಬಂದ್ರೆ ಸಡಿಲಿಕೆ ಮುಂದುವರಿಕೆ ಮಾಡಲಾಗುವುದು ಎಂದು ಆದೇಶ ನೀಡಲಾಗಿದೆ ಎಂದು ಹೇಳಿದರು.

ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಂಡಿದೆ ಎಂದರು‌.

ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿಂದ ದಿನಾಂಕ: 19-07-2021 ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳನ್ನು ಹಾಗೂ ನಿರ್ಬಂಧಗಳನ್ನು ಜಾರಿಮಾಡಲಾಗಿದೆ.

ಸರ್ಕಾರಿ/ಖಾಸಗಿ ಕಚೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
ಪಬ್ ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ.

ಬಾರ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ಆಯಾ ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಬಿ ಎಸ್ ವೈ ವಿವರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *