ರಾಜ್ಯ

ನ್ಯಾ. ಕೆ.ಎನ್. ಫಣಿಂದ್ರ ಉಪಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು prajakiran. com : ರಾಜ್ಯದ ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರು ಮಂಗಳವಾರ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ನ್ಯಾಯಮೂರ್ತಿ ಕೆ ಎನ್ ಫಣಿಂದ್ರ ಅವರಿಗೆ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನವನ್ನು ಭೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *