ಧಾರವಾಡ ಪ್ರಜಾಕಿರಣ.ಕಾಮ್ : ಪ್ರಧಾನಿ ನರೇಂದ್ರ ಮೋದಿಯವರು ದೇಶದ ಐದು ಕಡೆಗಳಲ್ಲಿ ವಂದೇ ಭಾರತ ಎಕ್ಸಪ್ರೆಸ್ ರೈಲಿಗೆ ಇಂದು ಏಕಕಾಲಕ್ಕೆ ಚಾಲನೆ ನೀಡಿದರು.
ಧಾರವಾಡದಿಂದ ಬೆಂಗಳೂರಿಗೆ ರಾಜ್ಯದ ಎರಡನೇ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಿದೆ.
ಇದರಿಂದ ಉತ್ತರ ಕರ್ನಾಟಕ ಭಾಗದ ಜನರು ಅತ್ಯಂತ ಕಡಿಮೆ ಅವಧಿಯಲ್ಲಿ ವೇಗವಾಗಿ ಬೆಂಗಳೂರು ತಲುಪಲು ಅನುಕೂಲವಾಗಲಿದೆ.
ಉತ್ತರ ಕರ್ನಾಟಕ ಭಾಗದ ಜನತೆಗೆ ಈ ಸೌಲಭ್ಯ ಒದಗಿಸಿಕೊಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವಿಗೆ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ ಅಭಿನಂದಿಸಿದ್ದಾರೆ.