ಬೆಂಗಳೂರು Prajakiran.com :ದೇಶದಲ್ಲಿ ಗ್ರಾಮಗಳಲ್ಲಿಯೂ ಜನರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ ಸುಧಾಕರ್ ಕೇಂದ್ರ ಸರ್ಕಾರದ ವತಿಯಿಂದ ಇಂದು ರಾಜ್ಯಕ್ಕೆ ಬಂದಿರುವ ಕೋವಿಡ್ ಲಸಿಕೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಟ್ವಿಟ್ಟರ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ ಇಂದು 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಕರ್ನಾಟಕಕ್ಕೆ ಬಂದಿದೆ.
ಕೇಂದ್ರದಿಂದ ಪಡೆದ ಒಟ್ಟು ಕೋವ್ಯಾಕ್ಸಿನ್ ಡೋಸ್ 12,91,280. ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವ್ಯಾಕ್ಸಿನ್ ಡೋಸ್ 1,44,170 ಎಂದು ತಿಳಿಸಿದ್ದಾರೆ.